Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ 301ಕ್ಕೆ ಏರಿಕೆಯಾದ ಒಟ್ಟು ಕೊರೊನಾ ಸೊಂಕಿತರ ಸಾವು

    ಮಂಗಳೂರು ಅಗಸ್ಟ್ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 64 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2420 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು ಕೂಡ ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -139, ಬಂಟ್ವಾಳ – 35, ಸುಳ್ಯ -3, ಬೆಳ್ತಂಗಡಿ – 4, ಪುತ್ತೂರು – 11, ಹೊರ ಜಿಲ್ಲೆಯವರು – 10 ಪ್ರಕರಣಗಳಿವೆ.

    ಉಡುಪಿ ಕೊರೊನಾ ಮಾಹಿತಿ

    ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 278 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 9668 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ.

    ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 6857 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2729 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1130 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1599 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 82 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 159, ಕುಂದಾಪುರ -99 , ಕಾರ್ಕಳ -14, ಜಿಲ್ಲೆಯ ಹೊರಗಿನ – 6 ಪ್ರಕರಣಗಳಿವೆ.

    Share Information
    Advertisement
    Click to comment

    You must be logged in to post a comment Login

    Leave a Reply