Connect with us

    LATEST NEWS

    ದಕ್ಷಿಣಕನ್ನಡದಲ್ಲಿ ಇಂದು 4 ಕೊರೊನಾ ಪ್ರಕರಣ…ಉಡುಪಿ ಜಿರೋ

    ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 214ಕ್ಕೆ ಏರಿಕೆ

    ಮಂಗಳೂರು ಜೂನ್ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ 4 ಕೊರೊನಾ ಪ್ರಕರಣ ದೃಡಪಟ್ಟಿದ್ದು, ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ ಯಾವುದೇ ಕೊರೊನಾ ಪ್ರಕರಣ ದಾಖಲಾಗಿಲ್ಲ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 4 ಪ್ರಕರಣಗಳನ್ನು ಸೇರಿಸಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ 4 ಪ್ರಕರಣಗಳಲ್ಲಿ ಎರಡು ಪ್ರಕರಣ ದುಬೈಯಿಂದ ಆಗಮಿಸಿದವರಾಗಿದ್ದು ಮತ್ತೆ 2 ಪ್ರಕರಣ ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದವರಾಗಿದ್ದಾರೆ.

    ಇನ್ನು ಉಡುಪಿ ಜಿಲ್ಲೆಯಲ್ಲಿ ಸತತ ಎರಡನೇ ದಿನ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಇಂದು ಉಡುಪಿ ಜಿಲ್ಲೆಯಲ್ಲಿ 93 ಮಂದಿ ಕೊರೊನಾ ಸೊಂಕಿ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply