Connect with us

MANGALORE

ದಕ್ಷಿಣಕನ್ನಡ ಜಿಲ್ಲೆಯಲ್ಲಿ 49 ಉಡುಪಿಯಲ್ಲಿ 14 ಕೊರೊನಾ ಪ್ರಕರಣ ದಾಖಲು

ಮಂಗಳೂರು ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 49 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 568ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಉಳ್ಳಾಲದ ಒಂದೇ ಮನೆಯ 17 ಮಂದಿಗೆ ಕೊರೊನಾ ಸೊಂಕು ತಗುಲಿದ್ದು, ಸದ್ಯ ಉಳ್ಳಾಲದಲ್ಲಿ ಕೊರೊನಾ ಸಮುದಾಯ ಹರಡುವಿಕೆಯತ್ತ ಸಾಗಿದೆ ಎನ್ನಲಾಗಿದೆ.


ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 374 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 184 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 10 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನು ಉಡುಪಿಯಲ್ಲಿ ಇಂದು 14 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1139 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು 10 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಉಡುಪಿಯಲ್ಲಿ ಇವರೆಗೆ 1038 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಸದ್ಯ 99 ಕೊರೊನಾ ಸೊಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

comments