Connect with us

MANGALORE

ದಕ್ಷಿಣಕನ್ನಡ 83 ಉಡುಪಿ 28 ಕೊರೊನಾ ಪ್ರಕರಣ ಪತ್ತೆ

ಮಂಗಳೂರು ಜುಲೈ 7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 83 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1359ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ 48 ಮಂದಿಗೆ ಪ್ರಾಥಮಿಕ ಸಂಪರ್ಕದಲ್ಲಿ ಸೋಂಕು ಬಂದಿದ್ದು, ಉಳಿದಂತೆ ILI – 20 , ಇಬ್ಬರಿಗೆ ದ್ವಿತೀಯ ಸಂಪರ್ಕದಲ್ಲಿ ಕೊರೊನಾ ಸೋಂಕು , ಚಿಕ್ಕಮಗಳೂರು ಜಿಲ್ಲೆ ಪ್ರಯಾಣದ ಹಿನ್ನೆಲೆಯಿದ್ದ ಇಬ್ಬರಿಗೆ ಸೋಂಕು , ರೋಗದ ಮೂಲ ಪತ್ತೆಯಾಗದ ಮೂವರಲ್ಲಿ ಕೊರೊನಾ ಬಂದಿದೆ. ಸಾಮೂಹಿಕ ಪರೀಕ್ಷೆಯಲ್ಲಿ ಮೂವರಿಗೆ ಕೊರೊನಾ ಪತ್ತೆಯಾಗಿದೆ.


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1359 ಆಗಿದ್ದು, ಇಂದು 99 ಮಂದಿ ಕೊರೊನಾದಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ದ.ಕ. ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 650 ಇದ್ದು , ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಉಡುಪಿಯಲ್ಲಿ ಇಂದು 28 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಕೊರೋನಾ ಪೀಡಿತರ ಸಂಖ್ಯೆ1390ಕ್ಕೆ ಏರಿಕೆಯಾಗಿದೆ. ಇಂದ ಪತ್ತೆಯಾದ ಪ್ರಕರಣದಲ್ಲಿ ಪ್ರಾಥಮಿಕ ಸಂಪರ್ಕದಿಂದಲೇ ಹೆಚ್ಚಿನವರಿಗೆ ಸೋಂಕು ಬಂದಿದೆ. ಇನ್ನು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 235 ಸೋಂಕಿತರಿಗೆ ಕೊರೋನಾ ಚಿಕಿತ್ಸೆ ನೀಡಲಾಗುತ್ತಿದೆ.

Facebook Comments

comments