LATEST NEWS
‘ ಮಂಗಳೂರು ಚಲೋ ‘ ಕಾರ್ಯಕರ್ತರ ಜಿಲ್ಲೆಯ ಪ್ರವೇಶಕ್ಕೆ ತಡೆಯಾದ ಪೊಲೀಸರು.

ಪುತ್ತೂರು ಸೆಪ್ಟೆಂಬರ್ 6: ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಆಯೋಜಿಸಿರುವ ಮಂಗಳೂರು ಚಲೋ ಬೈಕ್ Rally ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಸಂಪಾಜೆ ಗಡಿ ಮೂಲಕ ಜಿಲ್ಲೆಗೆ ಆಗಮಿಸಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಾದ ಚಾರ್ಮಾಡಿ, ಸಂಪಾಜೆ ಹಾಗೂ ಗುಂಡ್ಯಾ ಚೆಕ್ ಪೋಸ್ಟ್ ಗಳಲ್ಲಿ ಪೋಲಿಸ್ ರ ತಪಾಸಣೆ ನಡೆಯುತ್ತಿದೆ. ಬಿಜೆಪಿ ಯುವ ಮೋರ್ಚಾ ದ ವತಿಯಿಂದ ರಾಜ್ಯದ 5 ಭಾಗಳಿಂದ ಮಂಗಳೂರು ಚಲೋ ಪ್ರತಿಭಟನಾ ಬೈಕ್ Rally ಆರಂಭಗೊಂಡಿದೆ. ಬೆಂಗಳೂರು, ಹುಬ್ಬಳ್ಳಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಮೈಸೂರಿನಿಂದ ಬೈಕ್ Rally ಹೊರಟಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾಹಿತಿ ಹಿನ್ನಲೆಯಲ್ಲಿ ಜಿಲ್ಲೆಯ ಗಡಿ ಭಾಗಗಳನ್ನು ಪೊಲೀಸರು ಕಾಯುತ್ತಿದ್ದಾರೆ. ದಕ್ಷಿಣಕನ್ನಡ ಪ್ರವೇಶಿಸಲು ಯತ್ನಿಸುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಸಜ್ಜಾಗಿದ್ದು ತೀವ್ರ ತಪಾಸಣೆ ನಡೆಸಲಾಗುತ್ತಿದೆ.
