ಮಂಗಳೂರು ಸೆಪ್ಟೆಂಬರ್ 11: ಅಜಾನ್ ನನ್ನು ನಿಲ್ಲಿಸಬೇಕೆಂದು 10.30 ಮೈಕ್ ಬಂದ್ ಮಾಡಬೇಕೆಂದು ಕಾನೂನು ತಂದಿದ್ದರು. ಇದೀಗ ಕಾನೂನು ಎಲ್ಲರಿಗೂ ಒಂದೇ ಆಗಿದೆ ಎಂದು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದ್ದಾರೆ.


ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಜಾನ್ ನ್ನು ನಿಲ್ಲಿಸಬೇಕೆಂದು ಕೇಂದ್ರದಲ್ಲಿ ಕಾನೂನು ತಂದಿದ್ದರು, ಅಜಾನ್ ನಿಂದ ಯಾರಿಗೂ ತೊಂದರೆ ಆಗಿಲ್ಲ, ಇದೀಗ ಕಾನೂನು ಎಲ್ಲಿರಗೂ ಒಂದೇ ಆಗಿದೆ. ಅಲ್ಲದೆ ಇದೀಗ ಕಾನೂನು ಸರಿಯಾಗಿ ಅನುಷ್ಟಾನ ಆಗಿದೆ ಎಂದರು. ಈಗ ಎಲ್ಲಡೆ ಗಣೇಶೋತ್ಸವ ಶಾಂತಿಯುತವಾಗಿ ನಡೆದಿದೆ. ಕಾರ್ಯಕ್ರಮಗಳಿಗೆ ಅನುಮತಿ ಪಡೆಯದವರಿಗೆ ಸ್ವಲ್ಪ ತೊಂದರೆ ಆಗಿದ್ದು ನಿಜ. ಡಿಜೆಗೆ ಅವಕಾಶ ನೀಡದಿರುವುದು ಸ್ವಾಗತಾರ್ಹ. ಆರೋಗ್ಯಕ್ಕೆ ಹಾನಿಕಾರವಾದ ಡಿಜೆಗೆ ಇನ್ನು ಮುಂದೆಯೂ ಪೊಲೀಸ್ ಇಲಾಖೆ ಅವಕಾಶ ನೀಡಬಾರದು.

ಧ್ವನಿವರ್ಧಕ, ಶಾಮಿಯಾನ, ಲೈಟಿಂಗ್ಸ್ ನವರಿಗೆ ತೊಂದರೆ ಆಗಿಲ್ಲ . ಸರಕಾರ ಕಾನೂನು ಮಾಡಿರುವುದನ್ನು ಅಧಿಕಾರಿಗಳು ಅನುಷ್ಠಾನ ಮಾಡಿದ್ದಾರೆ. ಏನಾದರೂ ಸಣ್ಣಪುಟ್ಟ ಲೋಪದೋಷಗಳು ಕಾಣಿಸಿಕೊಂಡಿದ್ದರೆ ಅವುಗಳನ್ನು ಸಂಬಂಧಪಟ್ಟವರನ್ನು ಕರೆಸಿ ಸಭೆ ನಡೆಸಿ ಸರಿಪಡಿಸುವ ಬಗ್ಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದರು.

ದ.ಕ. ಜಿಲ್ಲೆಯಲ್ಲಿ ಸರಣಿಯ ಹತ್ಯೆಗಳು ನಡೆದ ಬಳಿಕ ಪೊಲೀಸ್ ಅಧಿಕಾರಿಗಳು ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದ ಕಾರಣದಿಂದಾಗಿ ಶಾಂತಿ ನೆಲೆಸಿದೆ. ಇದೀಗ ಆತಂಕ ದೂರವಾಗಿ ಜನರಿಗೆ ಶಾಂತಿ, ನೆಮ್ಮದಿಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ.ಹೊಡಿ, ಬಡಿ, ಕಡಿ, ಕೋಮು ದ್ವೇಷದ ಭಾಷಣಕ್ಕೆ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ದ.ಕ. ಜಿಲ್ಲಾ ಎಸ್ಪಿ ಕಡಿವಾಣ ಹಾಕಿದ್ದಾರೆ.
ಹಿಂದೆ ದ್ವೇಷ ಭಾಷಣ ಮಾಡುತ್ತಿದ್ದವರು ಇದೀಗ ಸೈಲೆಂಟ್ ಆಗಿದ್ದಾರೆ, ಹಿಂದೂ ರಕ್ಷಕರಿಗೆ ಈಗ ಭಯ ಯಾಕೆ ಈಗಲೂ ಭಾಷಣ ಮಾಡಿ ಹೇಡಿಗಳು ಇವರೆಲ್ಲ, ಹಿಂದುತ್ವದ ಹೆಸರಿನಲ್ಲಿ ಮತ ಬ್ಯಾಂಕ್ ಗಾಗಿ ಕೆಲಸ ಮಾಡುವವರು ಇವರು ದೇಶಕ್ಕಾಗಿ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎರಡು ದಿನಗಳ ಹಿಂದೆ ದ್ವಿಚಕ್ರ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗೆ ಬಿದ್ದು ಮಾಧವಿ ಎಂಬವರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಧ್ವನಿಯೆತ್ತಿಲ್ಲ ಏಕೆ?. ಹಿಂದೂ ಮಹಿಳೆ ಅಪಘಾತದಲ್ಲಿ ಮೃತಪಟ್ಟಿದ್ದರೂ ಆಕೆಗೆ ನ್ಯಾಯ ದೊರಕಿಸಲು ಬಿಜೆಪಿಯ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್ , ರಾಜ್ಯಾಧ್ಯಕ್ಷ ವಿಜಯೇಂದ್ರ, ಪಕ್ಷದ ನಾಯಕರಾದ ಸಿ.ಟಿ.ರವಿ, ನಾರಾಯಣ ಸ್ವಾಮಿ ಯಾಕೆ ಬಂದಿಲ್ಲ ಎಂದು ಹರೀಶ್ ಕುಮಾರ್ ಪ್ರಶ್ನಿಸಿದರು.

Share Information