LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ 25 ಸಾವಿರಕ್ಕೆ ಏರಿಕೆಯಾದ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ

ಮಂಗಳೂರು ಅಕ್ಟೋಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 447 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ.
ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 447 ಮಂದಿಗೆ ಕೊರೋನ ಸೋಂಕು ತಗುಲಿದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25,276ಕ್ಕೇರಿದೆ. ಬುಧವಾರ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ 7 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೇರಿದೆ. ಅಲ್ಲದೆ ಬುಧವಾರ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಜಿಲ್ಲೆಯಲ್ಲಿ 1,80,010 ಮಂದಿಯ ಪರೀಕ್ಷೆ ಮಾಡಿಸಲಾಗಿದೆ. ಆ ಪೈಕಿ 1,54,734 ಮಂದಿಯ ವರದಿ ನೆಗೆಟಿವ್ ಮತ್ತು 25,276 ಮಂದಿಯ ವರದಿ ಪಾಸಿಟಿವ್ ಬಂದಿದೆ. ಸದ್ಯ ಜಿಲ್ಲೆಯಲ್ಲಿ 4,688 ಸಕ್ರಿಯ ಪ್ರಕರಣಗಳಿವೆ.
