Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಲ್ಲಿ 89 ಕೊರೊನಾ ಪ್ರಕರಣ 5 ಸಾವು

ಮಂಗಳೂರು ಜುಲೈ20: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 5 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 89 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 82 ಕ್ಕೆ ಏರಿಕೆಯಾಗಿದೆ. ಇಂದಿನ 89  ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3685 ಕ್ಕೆ ಏರಿಕೆಯಾಗಿದೆ.

ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 11, ILI – 45, SARI -16, ವಿದೇಶ ಪ್ರಯಾಣ – 2, ಸಂಪರ್ಕ ಪತ್ತೆ ಹಚ್ಚಲಾಗುತ್ತಿರುವ -15 ಪ್ರಕರಣಗಳು ಇವೆ. ಇಂದು ಜಿಲ್ಲೆಯಲ್ಲಿ 57  ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2055 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 82  ಕ್ಕೆ ಏರಿಕೆಯಾಗಿದೆ.

Facebook Comments

comments