LATEST NEWS
ದಕ್ಷಿಣಕನ್ನಡದಲ್ಲಿ ಕೊರೊನಾಗೆ ಮತ್ತೊಂದು ಬಲಿ

ಮಂಗಳೂರು ಜುಲೈ2: ದಕ್ಷಿಣಕನ್ನಡದಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಕೊರೊನಾದಿಂದ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಬಂಟ್ವಾಳ ತಾಲೂಕಿನ ಕಲ್ಲಡ್ಕದ ನಿವಾಸಿ 49ರ ಹರೆಯದ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದು, ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೊರೊನಾ ಸೊಂಕು ಇರುವುದು ದೃಢಪಟ್ಟಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಇವರೆಗೆ 18 ಮಂದಿ ಬಲಿಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಮರಣಮೃದಂಗ ಭಾರಿಸುತ್ತಿದೆ.
