LATEST NEWS
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ವರ್ಗಾವಣೆ
ಮಂಗಳೂರು ಜುಲೈ 28: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಅಧಿಕಾರ ಸ್ವಿಕರಿಸಲಿದ್ದಾರೆ.
ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್ ಅವರನ್ನು ಬೆಂಗಳೂರಿನ ಇಡಿಸಿಎಸ್ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದರು.
ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಜಿಲ್ಲೆಯಲ್ಲಿ ಕೊರೊನಾ ನಿರ್ವಹಣೆ ಸಂಪೂರ್ಣ ವಿಫಲರಾಗಿದ್ದು, ಈಗಾಗಲೇ ದಕ್ಷಿಣಕನ್ನಡ ಕರ್ನಾಟಕ ಕೊರೊನಾ ಹಾಟ್ ಸ್ಪಾಟ್ ಆಗಿ ಗುರುತಿಸಿಕೊಂಡಿದೆ. ಈ ನಡುವೆ ಇತ್ತೀಚೆಗಿನ ಗೋಸಾಗಾಟ ಗೊಂದಲದ ಬಗ್ಗೆ ಜಿಲ್ಲಾಧಿಕಾರಿ ಟೀಕೆಗೊಳಗಾಗಿದ್ದರು. ಈ ಎಲ್ಲಾ ಕಾರಣಗಳು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆಗೆ ಕಾರಣ ಎಂದು ಹೇಳಲಾಗಿದೆ.