Connect with us

LATEST NEWS

ಶಾಲಾ ಮಕ್ಕಳ ನೆಚ್ಚಿನ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ

ಮಂಗಳೂರು, ಜೂನ್ 17 : ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ.


ಕಳೆದ ಎರಡೂವರೆ ವರ್ಷ ಮುಲ್ಲೈ ಮುಗಿಲನ್ ಅವರು ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಯಾವುದೇ ವಿವಾದಗಳಿಗೆ ಸಿಲುಕದೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ್ದರು, ಅಲ್ಲದೆ ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಅತೀ ಹೆಚ್ಚು ರಜೆ ಕೊಟ್ಟು ಶಾಲೆ ಮಕ್ಕಳಲ್ಲೂ ರಜೆ ಕೊಡುವ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *