ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಮತಯಾಚನೆ

ಮಂಗಳೂರು ಮಾರ್ಚ್ 31: ದೇಶದಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ರಂಗೇರ ತೊಡಗಿದೆ. ಕರಾವಳಿಯ ಜಿಲ್ಲೆಗಳಲ್ಲೂ ಕೂಡ ಚುನಾವಣಾ ಪ್ರಚಾರ ತೀವ್ರಗೊಂಡಿದ್ದು, ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಮತ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ.

ರಾಜ್ಯದಾದ್ಯಂತ ಭಾರಿ ಕುತೂಹಲ ಮೂಡಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರ ಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ಕಾಂಗ್ರೇಸ್ ಹಾಗೂ ಬಿಜೆಪಿ ಮಧ್ಯೆ ನೇರಾ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಹಾಲಿ ಸಂಸದ ನಳಿನ್ ಕುಮಾರ್ ವಿರುದ್ದ ಮೊದಲ ಬಾರಿಗೆ ಕಾಂಗ್ರೇಸ್ ಹೊಸ ಮುಖ ಪರಿಚಯಿಸಿದ್ದು, ಯುವ ಮುಖಂಡ ಮಿಥುನ್ ರೈ ಈ ಬಾರಿ ಸ್ಪರ್ಧೆ ನಡೆಸುತ್ತಿದ್ದಾರೆ. ಈಗಾಗಲೇ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ತಮ್ಮ ಮತ ಪ್ರಚಾರ ಕಾರ್ಯವನ್ನು ಆರಂಭ ಮಾಡಿದ್ದು, ಇಂದು ಇಂದು ಮಂಜಾನೆ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ತೆರಳಿ ಮತಯಾಚನೆ ಮಾಡಿರು.

ಮಂಗಳೂರು ನಗರದ ಕದ್ರಿ ಪಾರ್ಕ್, ಮಣ್ಣ ಗುಡ್ಡದಲ್ಲಿನ ಗಾಂಧಿ ಪಾರ್ಕ್, ಹಾಗೂ ಸೆಂಟ್ರಲ್ ಮಾರುಕಟ್ಟೆ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಮಿಥುನ್ ರೈ ಅವರು ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸ಼ಚಿವ ಯು,ಟಿ, ಖಾದರ್, ಮಾಜಿ ಶಾಸಕ ಜೆ. ಆರ್. ಲೋಬೊ ಮತ್ತಿತರ ಮುಖಂಡರು ಮಿಥುನ್ ರೈ ಅವರಿಗೆ ಸಾಥ್ ನೀಡಿದರು.

3 Shares

Facebook Comments

comments