LATEST NEWS
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಗೆ ಹೊಸ ಸೇರ್ಪಡೆ

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಗೆ ಹೊಸ ಸೇರ್ಪಡೆ
ಮಂಗಳೂರು ಡಿಸೆಂಬರ್ 15: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಂತೆ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಸ್ಥಾನಕ್ಕೆ ಈಗಾಗಲೇ ರಾಜಕೀಯ ಪಕ್ಷಗಳ ಆಕಾಂಕ್ಷಿ ಪಟ್ಟಿ ಬೆಳೆಯುತ್ತಿದೆ.
ಈ ನಡುವೆ ಬಿಜೆಪಿ ತೆಕ್ಕೆಯಲ್ಲಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ.
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಲ್ಲಿ ಚಟುವಟಿಕೆ ಶುರುವಾಗಿದೆ. ಬಿಜೆಪಿಯಿಂದ ಕಳೆರಡು ಬಾರಿ ಸತತ ಗೆಲುವು ದಾಖಲಿಸಿದ ನಳಿನ್ ಕುಮಾರ್ ಕಟೀಲ್ ಅವರನ್ನೇ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಆದರೆ ಈ ನಿರ್ಧಾರಕ್ಕೆ ಬಿಜೆಪಿ ಪಾಳಯದಲ್ಲೇ ವಿರೋಧ ಧ್ವನಿ ಕೂಡ ಕೇಳಿಬರುತ್ತಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಗಳು ಆರಂಭವಾಗಿದೆ.
ಈ ನಡುವೆ ಮಂಗಳೂರಿನ ಖ್ಯಾತ ನೇತ್ರತಜ್ಞ ಹಾಗು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಮುಖಂಡ ಡಾ. ಸುದೀರ್ ಹೆಗ್ಡೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಬಿಜೆಪಿ ಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದ ವಿರುವುದಾಗಿ ಅವರು ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರ ಒತ್ತಡದ ಮೇರೆಗೆ ನಾನು ಲೋಕಸಭೆಗೆ ಸ್ಪರ್ಧಿಸಲು ಸಿದ್ಧ ನಿದ್ದೇನೆ. ಟಿಕೆಟ್ ನೀಡುವ ವಿಚಾರ ಪಕ್ಷದ ಮುಖಂಡರಿಗೆ ಬಿಟ್ಟಿದ್ದು. ಒಂದು ವೇಳೆ ಅವಕಾಶ ಸಿಕ್ಕಿದರೆ ಕೈ ಮೀರಿ ಸೇವೆ ಮಾಡಲು ಸಿದ್ದ ಎಂದು ಅವರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನಿಷ್ಕಲ್ಮಶ ಮನಸ್ಸು, ದೇಶರಕ್ಷಣೆಗಾಗಿ ಅವರ ನಿಲುವು. ನೇರ ದಿಟ್ಟ ನಿರ್ಧಾರ ನಮಗೆ ಪ್ರೇರಣೆ . ಕಾರ್ಯಕರ್ತರ ಇಚ್ಛೆಯಂತೆ ಪಕ್ಷ ಅವಕಾಶ ನೀಡಿದರೆ ಜನಸೇವೆ ಮಾಡುವಲ್ಲಿ ಎರಡು ಮಾತಿಲ್ಲ . ಧಾರ್ಮಿಕ , ಶೈಕ್ಷಣಿಕ, ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಅನುಭವವಿದೆ.ಯುವಜನರಿಗೆ ಸರಿಯಾದ ಶಿಕ್ಷಣ ಜೊತೆಗೆ ಆರೋಗ್ಯದ ಅರಿವು ಮೂಡಿಸುವುದೇ ನನ್ನ ಗುರಿ ಎಂದು ಅವರು ತಿಳಿಸಿದ್ದಾರೆ.
ಡಾ ಸುದೀರ್ ಹೆಗ್ಡೆ ಅವರ ಈ ಹೇಳಿಕೆ ದಕ್ಷಿಣ ಕನ್ನಡ ಬಿಜೆಪಿ ಪಾಳಯದಲ್ಲಿ ಚರ್ಚೆಗೆ ಕಾರಣ ವಾಗಿದೆ. ಮುಂದಿನ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಈಗ ಪ್ರತಿಸ್ಪರ್ಧಿಯ ತಲೆ ನೂವು ಆರಂಭವಾಗಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತದ ಬಿಜೆಪಿ ಟಿಕೆಟ್ ಮೇಲೆ ಕೇವಲ ಡಾ ಸುದೀರ್ ಹಗ್ಡೆ ಮಾತ್ರವಲ್ಲದೇ ಬಿಜೆಪಿ ಯುವ ಮುಖಂಡ ಬ್ರಿಜೇಶ್ ಚೌಟ ಸೇರದಂತೆ ಇನ್ನಿತರರು ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್ ರಾಜಕೀಯ ಬಿರುಸುಗೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.