BELTHANGADI
ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ಅಣ್ಣಪ್ಪಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದೇನೆ – ಡಿ ಕೆ ಶಿವಕುಮಾರ್
ಬೆಳ್ತಂಗಡಿ ಮಾರ್ಚ್ 26: ಲೋಕಸಭೆ ಚುನಾವಣೆ ಈ ಯುದ್ದ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ಅಣ್ಣಪ್ಪಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗೋ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಧರ್ಮಸ್ಥಳಕ್ಕೆ ಆಗಮಿಸಿದ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವಾಗಲೂ ಧರ್ಮಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ, ಮಾತು ಬಿಡದ ಮಂಜುನಾಥ, ಕಾಸು ಬೆಳೆದ ತಿಮ್ಮಪ್ಪ ಅಂತಾ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ಅಣ್ಣಪ್ಪಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗೋ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಈ ಹಿನ್ನಲೆ ಇವತ್ತು ಇಲ್ಲಿಗೆ ಬಂದು ಮಂಜುನಾಥನ ದರ್ಶನ ಪಡೆದು ಹೊರಡುತ್ತಿದ್ದೇನೆ ಎಂದರು.
ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ ಅಂದರೆ ಮಾತು ಬಿಡದ ಮಂಜುನಾಥ, ನಾವು ಪಂಚ ಗ್ಯಾರೆಂಟಿಗಳನ್ನು ಕೊಟ್ಟ ಮಾತಿನಂತೆ ಉಳಿಸಿಕೊಂಡಿದ್ದೇವೆ. ಇನ್ನು ಹೆಚ್ಚಿಗೆ ಶಕ್ತಿ ಕೊಡಿ ಅಂತ ಹೇಳಿ ಆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ ಇದು ನಮ್ಮ ಭಾಗ್ಯ ಇನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು.
You must be logged in to post a comment Login