KARNATAKA
ಡಿಕೆಶಿ ದೊಡ್ಡ ಡೀಲ್ ಗಿರಾಕಿ..ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್ ಇದೆ..ಕಾಂಗ್ರೇಸ್ ನಾಯಕರ ಗುಸು ಗುಸು
ಬೆಂಗಳೂರು ಅಕ್ಟೋಬರ್ 13: ಮಾಧ್ಯಮಗೋಷ್ಠಿ ನಂತರ ಕಾಂಗ್ರೇಸ್ ನಾಯಕರ ಗುಸು ಗುಸು ಮಾತು ಇದೀಗ ವಿವಾದಕ್ಕೆ ಎಡೆ ಮಾಡಿದೆ. ಕಾಂಗ್ರೇಸ್ ನ ಪ್ರಮುಖ ನಾಯಕರ ಈ ಮಾತು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್ ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ, ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ವಿ ಎಸ್ ಉಗ್ರಪ್ಪ ಮತ್ತು ಸಲೀಂ ವೇದಿಕೆಯಲ್ಲಿ ಮಾತನಾಡಿರುವುದು ಸುದ್ದಿ ಚಾನೆಲ್ ಗಳ ರೆಕಾರ್ಡ್ ನಲ್ಲಿ ದಾಖಲಾಗಿದ್ದು ಕಾಂಗ್ರೆಸ್ ಮತ್ತು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.ವೇದಿಕೆಯಲ್ಲಿಯೇ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಅಸಮಾಧಾನ ಸ್ಫೋಟವಾಗಿದೆ. ಆಗ ವಿ ಎಸ್ ಉಗ್ರಪ್ಪ, ಪಟ್ಟು ಹಿಡಿದು ಅಧ್ಯಕ್ಷ ಸ್ಥಾನ ಕೊಡಿಸಿದ್ದು ನಾವು ಎಂದು ಹೇಳಿರುವುದೆಲ್ಲ ಆಡಿಯೊ-ವಿಡಿಯೊದಲ್ಲಿ ದಾಖಲಾಗಿದೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ಈ ವಿಚಾರವನ್ನು ಇದೀಗ ಬಿಜೆಪಿ ಮುಖ್ಯಮಂತ್ರಿಯಾಗುವ @DKShivakumar
ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಬಪಕ್ಷೀಯರೇ ಷರಾ ಬರೆದುಬಿಟ್ಟಿದ್ದಾರೆ.
ಈ ಮಾತುಗಳು, ಸಿದ್ದರಾಮಯ್ಯ ಅವರ ಬಹುದಿನಗಳ “ಡಿಕೆಶಿ ಪದಚ್ಯುತಿ” ಎಂಬ ಮಾಸ್ಟರ್ ಪ್ಲ್ಯಾನ್‌ನ ಭಾಗವೇ? ಎಂದು ಟ್ವಿಟ್ ಮಾಡಿ ಕಾಲೆಳೆದಿದ್ದಾರೆ.