LATEST NEWS
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಮಲಶಿಲೆ ದೇಗುಲಕ್ಕೆ ಭೇಟಿ

ಉಡುಪಿ ನವೆಂಬರ್ 28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿ ಪ್ರವಾಸದಲ್ಲಿದ್ದು, ಇಂದು ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಾಳೆ ಉಡುಪಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದರು.

ನಂತರ ರಾತ್ರಿಯ ಮಹಾಪೂಜೆಯಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ್ , ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿದರು. ನಾಳೆ ಡಿಕೆಶಿ ಕೊಲ್ಲೂರು, ಕೃಷ್ಣಮಠ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ.