LATEST NEWS
ಕಾನೂನಿಗೆ ತಲೆಬಾಗಿ ಬಂದಿದ್ದೇನೆ – ಡಿಕೆ ಶಿವಕುಮಾರ್

ಮಂಗಳೂರು: ಸುಳ್ಯ ನ್ಯಾಯಾಲಯದಿಂದ ವಾರೆಂಟ್ ಜಾರಿಯಾದ ಹಿನ್ನಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳ್ಯಕ್ಕೆ ಆಗಮಿಸಿದ್ದಾರೆ. ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಡಿಕೆಶಿಯವರು ಇಂದನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ಳಾರೆಯ ವ್ಯಕ್ತಿಯೊಬ್ಬರು ಡಿಕೆಶಿಗೆ ಫೋನ್ ಮಾಡಿದ್ದರು. ಈ ವೇಳೆ ಡಿಕೆಶಿ ಹಾಗೂ ವ್ಯಕ್ತಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಸಂಭಾಷಣೆಯ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಲು ಡಿಕೆಶಿ ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಡಿಕೆಶಿ ಮಾತ್ರ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಳ್ಯ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು.

ಈ ಸಂಬಂಧ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಡಿಕೆಶಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸಾಕ್ಷಿ ಹೇಳಲು ಬರಬೇಕು ಅಂತಾ ನ್ಯಾಯಾಲಯ ಹೇಳಿತ್ತು. ಪ್ರಾರಂಭದಲ್ಲಿ ನನಗೂ ಈ ಬಗ್ಗೆ ಗೊತ್ತಾಗಲಿಲ್ಲ. ನಮಗೆಲ್ಲಾ ಈ ವಿಚಾರದಲ್ಲಿ ಸ್ವಲ್ಪ ತಿಳುವಳಿಕೆ ಕಡಿಮೆ. ಲುಕ್ ಔಟ್ ನೋಟಿಸ್, ಪೇಪರ್ ನಲ್ಲಿ ಹಾಕ್ತೇವೆ ಆರ್ಡರ್ ಮಾಡಿದ್ದಾರೆ ಅಂತಾ ಗೊತ್ತಾಯ್ತು. ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ. ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ ಎಂದು ಡಿಕೆಶಿ ಪ್ರಶ್ನಿಸಿದರು