ಬಂಟ್ವಾಳ ಫೆಬ್ರವರಿ 07: ಪುತ್ತೂರಿನ ಕಾಂಗ್ರೇಸ್ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದರು.

ಪೂಜಾರಿಯವರು ಡಿಸಿಎಂ ಅವರ ಜತೆ ಸಾಕಷ್ಟು ಹೊತ್ತು ಮಾತುಕತೆ ನಡೆಸಿ ರಾಜಕೀಯವಾಗಿ ಹೆಚ್ಚಿನ ಏಳಿಗೆಯನ್ನು ಸಾಧಿಸಿ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನಗಳ ಜತೆಗೆ ಸಿಎಂ ಪದವಿಯನ್ನೂ ಏರುವಂತಾಗಲಿ ಎಂದು ಹರಸಿದರು ಎನ್ನಲಾಗಿದೆ. ಈ ಸಂದರ್ಭ ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮತ್ತಿತರಿದ್ದರು.



