Connect with us

LATEST NEWS

ನನ್ನ ತಮ್ಮ ಡಿಕೆ ಸುರೇಶ್ ಗೆ ವಿಧಾನಸಭೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ – ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು, ಜೂನ್ 25: ಚೆನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿಕೆ ಸುರೇಶ್ ಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ ನನ್ನ ತಮ್ಮನಿಗೆ ಸದ್ಯ ಚುನಾವಣೆ ಬಗ್ಗೆ ಆಸಕ್ತಿ ಇಲ್ಲ. ಜನರು ರೆಸ್ಟ್ ಮಾಡಿ ಅಂತ ಹೇಳಿದ್ದಾರೆ. ಆದರೆ ಪಕ್ಷದ ಕೆಲಸ ಮಾಡುತ್ತಾರೆ. ನಮಗೆ 85 ಸಾವಿರ ಜನ ಮತ ಕೊಟ್ಟಿದ್ದಾರೆ. ಎಂದಿಗೂ ಆ ಜನರನ್ನು ಬಿಡಲಾಗದು. ದೇವರು ನಮಗೆ ಈಗ ಅಧಿಕಾರ ಕೊಟ್ಟಿದ್ದಾರೆ. 136 ಸೀಟ್ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು. ಚನ್ನಪಟ್ಟಣ ಜನಕ್ಕೆ ಏನೂ ಆಗಿಲ್ಲ ಎಂಬ ಭಾವನೆ ಇದೆ. ನಾವು ಒಂದಿಷ್ಟು ಅಳಿಲು ಸೇವೆ ಮಾಡಬೇಕು ಎಂದು ಉದ್ದೇಶಿಸಿದ್ದೇವೆ. ಅದಕ್ಕೆಇದೀಗ ಸರಿಯಾದ ಸಮಯ ಎಂದರು.

ಹೆಚ್​ಡಿ ಕುಮಾರಸ್ವಾಮಿ‌ ಚನ್ನಪಟ್ಟಣ ನೋಡುವ ಮೊದಲು ನಾನು‌ ನೋಡಿದ್ದೇನೆ. ಕುಮಾರಸ್ವಾಮಿ ಬಹಳ‌ ಲೇಟಾಗಿ ರಾಜಕಾರಣಕ್ಕೆ‌ ಬಂದವರು‌. ನಾನು 1985ರಲ್ಲೇ ವಿಧಾನಸಭಾ ಚುನಾವಣೆಗೆ ನಿಂತೆ. ಅವರು 1995 ರ ನಂತರ ರಾಜಕಾರಣಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು ಎಂದು ಅವರು ಹೇಳಿದರು.

https://youtu.be/HShah5zdE9o
Share Information
Continue Reading
Advertisement
Click to comment

Leave a Reply

Your email address will not be published. Required fields are marked *