KARNATAKA
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೊನಾ

ಬೆಂಗಳೂರು ಅಗಸ್ಟ್ 25: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಕೊರೊನಾ ಸೊಂಕು ತಗುಲಿದೆ. ಈ ಹಿನ್ನಲೆ ಸದ್ಯ ಡಿಕೆಶಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನನ್ನ ಕೋವಿಡ್ ಪರೀಕ್ಷಾ ವರದಿ ಪಾಸಿಟೀವ್ ಬಂದಿದೆ. ಹೀಗಾಗಿ ನಾನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ,’ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿರುವ ಡಿಕೆಶಿ ಅವರ ಸದಾಶಿವನಗರ ನಿವಾಸಕ್ಕೆ ಸ್ಯಾನಿಟೈಜ್ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಮನೆಯ ಎದುರು ಕೊರೊನಾ ಪಾಸಿಟಿವ್ ಎಂದು ಸ್ಟಿಕರ್ ಹಾಕಲಾಗುತ್ತದೆ. ಕುಟುಂಬಸ್ಥರನ್ನು ಪ್ರಾಥಮಿಕ, ಕೆಲಸದವರನ್ನ ದ್ವಿತೀಯ ಸಂಪರ್ಕ ಎಂದು ಪರಿಗಣನೆ ಮಾಡಿ ನಿವಾಸದವರಿಗೆಲ್ಲ ಕೊರೊನಾ ರ‍್ಯಾಪಿಡ್ ಟೆಸ್ಟ್ ಮಾಡಿಸಲು ಮುಖ್ಯ ಆರೋಗ್ಯಾಧಿಕಾರಿ ಮನೋರಂಜನ್ ಹೆಗ್ಡೆ ಸೂಚನೆ ನೀಡಿದ್ದಾರೆ.