Connect with us

BELTHANGADI

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್

ಬೆಳ್ತಂಗಡಿ, ಎಪ್ರಿಲ್ 04: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಎ.4ರಂದು ಭೇಟಿ ನೀಡಿದರು.

ಕೇರಳದ ವಯನಾಡ್ ನಿಂದ ಧರ್ಮಸ್ಥಳದ ಹೆಲಿಪ್ಯಾಡ್ ಗೆ 10-55 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದರು.
ಜತೆಯಲ್ಲಿ ಮಿಥುನ್ ರೈ ಇದ್ದು ಬಳಿಕ ಸನ್ನಿಧಿ ವಸತಿಗೃಹಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕಾಂಗ್ರೆಸ್ ತಾಲೂಕು‌ ಮುಖಂಡರಾದ ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.‌

ಬಳಿಕ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಬಳಿಕ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ‌ನಿಲ್ದಾಣಕ್ಕೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.