KARNATAKA
ಪಾದಯಾತ್ರೆ ತಡೆಯಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು – ಡಿಕೆಶಿ

ಬೆಂಗಳೂರು ಜನವರಿ 06: ಜನರಿಗಾಗಿ ಕಾಂಗ್ರೇಸ್ ಪಕ್ಷ ಪಾದಯಾತ್ರೆ ಮಾಡುತ್ತಿದ್ದು, ಅದನ್ನು ತಡೆಯಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರನ್ನು ಬೇಕಾದರೂ ಬಂಧಿಸಲಿ. ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಪಾಲಿಸಿ ಕಾರ್ಯಕ್ರಮ ಮಾಡುತ್ತೇವೆ’ ಎಂದರು.

ರಾಜ್ಯದಲ್ಲಿ ಕೊವಿಡ್ ನಿರ್ಬಂಧ ಮಾಡಿ ವಿಧಾನಪರಿಷತ್ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮ ಮಾಡಿದ್ದಾರೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ’ ಎಂದರು