LATEST NEWS
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೋನಾ ಪಾಸಿಟಿವ್

ಮಂಗಳೂರು, ಜುಲೈ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸಮುದಾಯ ಹಂತದಲ್ಲಿರುವ ಕೊರೊನಾ ಸೊಂಕು ಈಗಾಗಲೇ ಹಲವು ಜನಪ್ರತಿನಿಧಿಗಳ ಕೊರೊನಾ ಸೊಂಕು ತಗುಲಿದೆ. ಇದೀಗ ಕಾಂಗ್ರೆಸ್‌ನ ಯುವ ನಾಯಕ ಮಿಥುನ್ ರೈ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಮಿಥುನ್ ರೈ ಅವರೇ ಟ್ವೀಟ್ ಮಾಡಿದ್ದು, ”ನನಗೆ ಕೊರೊನಾ ಪಾಸಿಟಿವ್ ಆಗಿದೆ. ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್‌ಗೆ ಒಳಗಾಗಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಪಡಿ” ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಒಂದು ದಿನದಲ್ಲೇ 238 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 2763 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
