LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ 14 ದಿನ ಲಾಕ್ ಡೌನ್ ವಿಸ್ತರಣೆಗೆ ಒತ್ತಡ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಜುಲೈ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ನಾಳೆ ಕೊನೆಯ ದಿನವಾಗಿರುವ ಹಿನ್ನಲೆ ಇಂದು ಸಂಜೆ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಬಗ್ಗೆ ಚರ್ಚಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಗೆ ಜನಪ್ರತಿನಿಧಿಗಳಿಂದ ಸಾರ್ವಜನಿಕರಿಂದ ಒತ್ತಾಯ ಕೇಳಿ ಬರುತ್ತಿದೆ. ಈ ಹಿನ್ನಲೆ ಇಂದು ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಲಾಕ್ ಡೌನ್ ವಿಸ್ತರಣೆ ಚರ್ಚಿಸಲಾಗುವುದು. ನಂತರ ನಾಳೆ ಸಿಎಂ ಜೊತೆ ಈ ಕುರಿತಂತೆ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

https://youtu.be/reaeXC_u6dU