KARNATAKA
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ
ಪ್ರಯಾಗ್ ರಾಜ್ ಫೆಬ್ರವರಿ 07: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಪಮುಖ್ಯಮಂತ್ಪಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಅವರು ಪಾಲ್ಗೊಂಡು ಪುಣ್ಯ ಸ್ನಾನ ನೇರವೇರಿಸಿದ್ದಾರೆ.
ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ. ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ.
144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ. ಡಿಕೆ ಶಿವಕುಮಾರ್ ಅವರು ಕೂಡ ಮಹಾಕುಂಭಮೇಳಕ್ಕೆ ತೆರಳಲಿದ್ದೇನೆ ಎಂದು ಹೇಳಿದ್ದಾರೆ.