Connect with us

    LATEST NEWS

    ಟ್ರಾಫಿಕ್ ರೂಲ್ಸ್ ಬ್ರೇಕ್ – ಮತ್ತೆ 207 ಮಂದಿ ಡಿಎಲ್ ಅಮಾನತಿಗೆ ಶಿಫಾರಸು

    ಮಂಗಳೂರು ಸೆಪ್ಟೆಂಬರ್ 05: ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿ ಯಲ್ಲಿ ಮೋಟಾರು ವಾಹನ ಕಾಯಿದೆ ಯಡಿ. ಅಗಸ್ಟ್ 21 ರಿಂದ ಸೆಪ್ಟೆಂಬರ್ 3 ರವರಗೆ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಮತ್ತೆ 207 ಜನರ ಡಿಎಲ್ ಅಮಾನತು ಮಾಡಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಶಿಫಾರಸು ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.


    ಅಮಾನತಿಗೆ ಪ್ರಸ್ತಾವನೆ ಸಲ್ಲಿಸಿರುವ ಪ್ರಕರಣಗಳಲ್ಲಿ ಅತಿವೇಗ, ದುಡುಕುತನ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿದ 59 ಪ್ರಕರಣಗಳು, ಮದ್ಯಸೇವಿಸಿ ವಾಹನ ಚಲಾಯಿಸಿದ 8, ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕ ರನ್ನು ಸಾಗಿಸಿರುವ 34, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿದ 4, ಟ್ರಿಪಲ್ ರೈಡಿಂಗ್ ನಡೆಸಿದ 4, ಹೆಲೈಟ್ ಧರಿಸದ ಸವಾರಿ ಮಾಡಿದ 19, ಸೀಟ್ ಬೆಲ್ಟ್ ಹಾಕದಿರುವ 6 ಮತ್ತು ಏಕಮುಖ ಸಂಚಾರ ಸೇರಿವೆ.

    ಕಳೆದ 15 ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನಿಷೇಧಿತ ಸ್ಥಳದಲ್ಲಿ ವಾಹನ ಪಾರ್ಕಿಂಗ್ ವಿರುದ್ಧ 407, ಕರ್ಕಶ ಹಾರನ್ ಬಳಕೆ ವಿರುದ್ಧ 45, ಟಿಂಟ್ ಗ್ಲಾಸ್ ಹಾಕಿರುವುದರ ವಿರುದ್ಧ 50 ಮತ್ತು ಬಸ್‌ಗಳ ಪುಟ್ ಬೋರ್ಡ್‌ನಲ್ಲಿ ಸಂಚಾರ ಮಾಡಿದವರ ವಿರುದ್ಧ 174 ಪ್ರಕರಣಗಳನ್ನು ದಾಖಲಿಸ ಲಾಗಿದೆ ಎಂದವರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply