KARNATAKA
’82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ?’ ಯಡಿಯೂರಪ್ಪ ವಿರುದ್ದ ಸಿಎಂ ಸಿದ್ದರಾಮಯ್ಯ ಗುಡುಗು..!
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾದ ಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎನ್ನುವ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಕಿಡಿ ಕಾರಿದ್ದಾರೆ. “ಯಡಿಯೂರಪ್ಪ ಮೇಲೆ ಪೋಕ್ಸೊ ಕೇಸ್ ಇದೆ. ನ್ಯಾಯಾಲಯದ ದಯೆಯಿಂದ ಯಡಿಯೂರಪ್ಪ ಬದುಕಿದ್ದಾರೆ.ಇಲ್ಲವಾದರೇ ಯಡಿಯೂರಪ್ಪ ಜೈಲಲ್ಲಿ ಇರಬೇಕಿತ್ತು.82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಚಿಕ್ಕ ಮಗುವಿನ ಮೇಲೆ ಈ ರೀತಿ ಮಾಡಬೇಕಿತ್ತಾ? ನನ್ನ ಬಗ್ಗೆ ಮಾತನಾಡುವುದ್ದಕ್ಕೆ ಯಡಿಯೂರಪ್ಪ ಅವರಿಗೆ ಯಾವ ನೈತಿಕತೆ ಇದೆ? ಎಂದ ಸಿಎಂ ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು’ ಎಂದು ಕಿಡಿ ಕಾರಿದರು.
ಮುಡಾದಲ್ಲಿ ಬದಲಿ ಭೂಮಿ ಪಡೆದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಬದಲಿ ಭೂಮಿ ಕೊಡುವುದು ಬೇಡ ಎಂದು ನಾನು ಹೇಳಿದ್ದೆ.ನನ್ನ ಪತ್ನಿ ಬದಲಿ ನಿವೇಶನಕ್ಕೆ ಅರ್ಜಿ ಕೊಟ್ಟಾಗ ನಾನು ಸಿಎಂ ಆಗಿದ್ದೆ.ನಾನು ಸಿಎಂ ಆಗಿರುವ ತನಕ ಕೊಡಬೇಡಿ ಎಂದಿದ್ದೆ.ಪ್ರಭಾವ ಬಳಸುವುದಿದ್ದರೇ ಅಂದೇ ಬಳಸಿ ಭೂಮಿ ಕೊಡಲು ಹೇಳುತ್ತಿದ್ದೆ. ಸಿಎಂ ಆಗಿ ಕೊಡಲು ಆಗಿತ್ತಿರಲಿಲ್ಲವೇ?.
ನನ್ನ ಪತ್ನಿ 2021ರಲ್ಲ ಅರ್ಜಿ ಹಾಕಿದ್ದು, ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಭೂಮಿ ನೀಡಿದೆ.ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಭಾವ ಬಳಸಿಲ್ಲ’ ಎಂದರು.‘ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ, ಇದೇ ಬೇರೆ. ಯಡಿಯೂರಪ್ಪ ಡಿನೋಟಿಫೈ ಮಾಡಿದ್ದರು., ಚೆಕ್ ಮೂಲಕ ಹಣ ಪಡೆದಿದ್ದರು.ಇಲ್ಲಿ ನಾನು ಯಾವುದೇ ಹಣ ಪಡೆದಿಲ್ಲ, ಪ್ರಭಾವ ಬೀರಿಲ್ಲ’”ಇಂದು ಬೇಡ ಮೈಸೂರು ಸಮಾವೇಶದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರದ ಅವಧಿಯ ಎಲ್ಲ ಹಗರಣಗಳನ್ನ ಬಿಚ್ಚಿಡುತ್ತೇನೆ.ಜೆಡಿಎಸ್- ಬಿಜೆಪಿ ಏನೆಲ್ಲ ಹಗರಣಗಳನ್ನ ಮಾಡಿದ್ದಾರೆ. ಎಲ್ಲವನ್ನೂ ಸಂಪೂರ್ಣವಾಗಿ ಸಮಾವೇಶದಲ್ಲಿ ತೆರೆದಿಡುತ್ತೇನೆ’ ಎಂದು ಕಿಡಿ ಕಾರಿದರು.
‘ಸುಳ್ಳುಗಳನ್ನ ಹೆದರಿಸುವ ತಾಖತ್ತು ನನಗೆ ಇದೆ.ಇವರ ಸುಳ್ಳುಗಳಿಗೆ ನಾನು ಹೆದರುವುದಿಲ್ಲ.ಬಿಜೆಪಿಯವರದ್ದೇ ಭ್ರಷ್ಟ ಸರ್ಕಾರ.ಅವರದ್ದೇ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ.ಅಪರೇಷನ್ ಕಮಲದ ಮೂಲಕ ಸರ್ಕಾರ ದುರ್ಬಲಗೊಳಿಸಲು ಯತ್ನ ಮಾಡಿದ್ದರು. ಅಪರೇಷನ್ ಕಮಲ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿ- ಜೆಡಿಎಸ್ ನವರು ನನ್ನನ್ನ ಟಾರ್ಗೆಟ್ ಮಾಡಿ ಸರ್ಕಾರವನ್ನ ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರ.ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ.ಜನ ಇವರ ಸುಳ್ಳನ್ನ ನಂಬುವುದಿಲ್ಲ.ಹಿಂದೆಯೂ ಈ ಪ್ರಯತ್ನ ಮಾಡಿದ್ದರು’ ಎಂದು ಹರಿಹಾಯ್ದರು.
You must be logged in to post a comment Login