Connect with us

  DAKSHINA KANNADA

  ಪುತ್ತೂರು ಸರಕಾರಿ ಆಸ್ಪತ್ರೆಗೆ ರೋಟರಿ ಕ್ಲಬದ ನಿಂದ 6 ಡಯಾಲಿಸೀಸ್ ಯಂತ್ರಗಳ ಕೊಡುಗೆ

  ಪುತ್ತೂರು, ಜೂನ್ 07: ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್ ಮತ್ತು ಅಮೇರಿಕಾದ ಫ್ಲೋರಿಡಾದಲ್ಲಿರುವ ರೋಟರಿ ಕ್ಲಬ್ ನ್ಯೂ ಟಾಂಪಾನೂನ್ ಇವರ ಸಹಯೋಗದಲ್ಲಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ 6 ಅತ್ಯಾಧುನಿಕ ಡಯಾಲಿಸೀಸ್ ಯಂತ್ರಗಳನ್ನು ನೀಡಲಾಗುವುದು ಎಂದು ಪುತ್ತೂರು ರೋಟರಿ ಕ್ಲಬ್ ಇಲೈಟ್ ಅಧ್ಯಕ್ಷ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.

  ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆಸ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 9 ರಂದು ಯಂತ್ರಗಳ ಹಸ್ತಾಂತರ ಕಾರ್ಯ ನಡೆಯಲಿದೆ ಎಂದ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಡಯಾಲಿಸೀಸ್ ಯಂತ್ರಗಳ ಲೋಕಾರ್ಪಣೆ ನಡೆಸಲಿದ್ದಾರೆ ಎಂದ ಅವರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಯಂತ್ರಗಳು ಕಾರ್ಯಾಚರಿಸುತ್ತಿದ್ದು, ಹೆಚ್ಚುವರಿಯಾಗಿ 6 ಯಂತ್ರಗಳು ಸೇರ್ಪಡೆಗೊಳ್ಳಲಿದೆ ಎಂದರು.

  ಡಯಾಲಿಸೀಸ್ ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ 90 ಕ್ಕೂ ಮಿಕ್ಕಿದ ರೋಗಿಗಳು ಡಯಾಲಿಸೀಸ್ ಗಾಗಿ ಕಾಯ್ದಿರಿಸಿದ ಪಟ್ಟಿಯಲ್ಲಿ, ಈ ಯಂತ್ರಗಳಿಂದಾಗಿ ಈ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು.

  Share Information
  Advertisement
  Click to comment

  You must be logged in to post a comment Login

  Leave a Reply