Connect with us

DAKSHINA KANNADA

ದ.ಕ.ದಲ್ಲಿ ಬಿಜೆಪಿ ಜನಪ್ರತಿನಿಧಿಗಳ ಬೆದರಿಕೆಗಳಿಗೆ ಅಂಜದೆ ನಿರ್ಭೀತಿಯಿಂದ ಕೆಲಸ ಮಾಡಿ- ರಮಾನಾಥ ರೈ

Share Information

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಬೆದರಿಕೆಗಳಿಗೆ ಬೆದರದೆ ನಿರ್ಭೀತಿಯಿಂದ ಕೆಲಸ ಮಾಡಿ ಎಂದು ಮಾಜಿ ಸಚಿವ ಕಾಂಗ್ರೆಸ್ ಹಿರಿಯ  ನಾಯಕ  ಬಿ ರಮಾನಾಥ ರೈ ಕರೆ ನೀಡಿದ್ದಾರೆ.
ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಬೆದರಿಕೆಗಳಿಗೆ ಬೆದರದೆ ನಿರ್ಭೀತಿಯಿಂದ ಕೆಲಸ ಮಾಡಿ ಎಂದು ಮಾಜಿ ಸಚಿವ ಕಾಂಗ್ರೆಸ್ ಹಿರಿಯ  ನಾಯಕ  ಬಿ ರಮಾನಾಥ ರೈ ಕರೆ ನೀಡಿದ್ದಾರೆ.
 ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತಾಡಿದ ರೈ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳು ನೀರಿನಿಂದ ತೆಗೆದ ಮೀನಿನಂತಾಗಿದ್ದಾರೆ.  ಜಿಲ್ಲೆಯಲ್ಲಿ ಚುನಾಯಿತ ಜನಪ್ರತಿನಿಧಿಗಳಾದ ಶಾಸಕರು ಹಾಗೂ ಸಂಸದರು ಸರ್ಕಾರಿ ಅಧಿಕಾರಿಗಳನ್ನು ಬೆದರಿಸುವ ತಂತ್ರವನ್ನು ಅನುಸರಿಸುತ್ತಿದ್ದಾರೆ.
ಇದಕ್ಕೆ ಜಗ್ಗದೆ ಕಾನೂನು ಪ್ರಕಾರ ಅಧಿಕಾರಿಗಳು ಕಾರ್ಯ ನಿರ್ವಹಿಸಿಬೇಕು ಎಂದರು. ಇಂತಹ ದಬ್ಬಾಳಿಕೆಗಳು ಬಿಜೆಪಿ ಆಡಳಿತ ಇರುವಾಗ ಅಧಿಕಾರಿಗಳ ಮೂಲಕ ನಡೆಸಲಾಗುತ್ತಿತ್ತು. ಆದರೆ ಅದನ್ನೀಗ ಮಾಡಲು ಸಾಧ್ಯವಾಗುತ್ತಿಲ್ಲ.

ಹಾಗಾಗಿ ಅಧಿಕಾರಿಗಳನ್ನು ಬೆದರಿಸುವ ತಂತ್ರವನ್ನು ಜಿಲ್ಲೆಯಲ್ಲಿ ಮಾಡಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 136 ಶಾಸಕರನ್ನು ಗೆದ್ದ ಬಲಿಷ್ಟ ಸರಕಾರ ಆಡಳಿತದಲ್ಲಿದೆ.

ಅಧಿಕಾರಿಗಳು ಇದಕ್ಕೆ ಸೊಪ್ಪು ಹಾಕಬಾರದು. ಶಿಷ್ಟಾಚಾರ ನೆಪದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಪ್ರತಿಭಟನೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ರೈ ನುಡಿದರು.

ಇಬ್ರಾಹಿಂ ಕೊಡಿಜಾಲ್, ಶಶಿಧರ್ ಹೆಗ್ಡೆ, ಪ್ರಕಾಶ್ ಶೆಟ್ಟಿ ತುಂಬೆ, ಆರ್ ಕೆ ಪ್ರಥ್ವಿರಾಜ್, ವಿಶ್ವಶ್ ಕುಮಾರ್ ದಾಸ್, ಶಾಹುಲ್ ಹಮೀದ್, ಜೋಕಿಮ್ ಡಿ ಸೋಜಾ, ಬೇಬಿ ಕುಂದರ್, ಜೆ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಜಯಶೀಲಾ ಅದ್ಯಾಣ್ತಯ, ಸುಹಾನ್ ಆಳ್ವಾ, ಸಬೀರ್ ಎಸ್, ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Share Information
Advertisement
Click to comment

You must be logged in to post a comment Login

Leave a Reply