Connect with us

    DAKSHINA KANNADA

    ಹೊರಗಿನವರು ಬಂದು ಬೋಳಿಯಾರಿನ ಸಾಮರಸ್ಯ ಕೆಡಿಸಬೇಡಿ : ಸ್ಪೀಕರ್ ಯು. ಟಿ. ಖಾದರ್..!

    ಉಳ್ಳಾಲ ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದತೆಯಿಂದ ಬಾಳುತ್ತಿದ್ದು ಹೊರಗಿನವರು ಇಲ್ಲಿ ಬಂದು ಸಾಮರಸ್ಯದ ವಾತಾವರಣ ಕೆಡಿಸಬೇಡಿ ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

    ಮಂಗಳೂರು : ಉಳ್ಳಾಲ ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದತೆಯಿಂದ ಬಾಳುತ್ತಿದ್ದು ಹೊರಗಿನವರು ಇಲ್ಲಿ ಬಂದು ಸಾಮರಸ್ಯದ ವಾತಾವರಣ ಕೆಡಿಸಬೇಡಿ ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.


    ಬೋಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣದ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು ಬೋಳಿಯಾರ್ ಅನ್ನೋದು ಸಹೋದರತೆ ಇರೋ ಊರು, ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದ್ದು ಅದನ್ನ ಅಲ್ಲಿನ ಊರಿನವರೇ ಸರಿ ಪಡಿಸುವ ಕೆಲಸ ಮಾಡ್ತಿದ್ದಾರೆ ಆದ್ದರಿಂದ ದಯವಿಟ್ಟು ಹೊರಗಿನವರು ಅಲ್ಲಿ ಬಂದು ಯಾರೂ ಶಾಂತಿ‌ ಕೆಡಿಸಬೇಡಿ ಎಂದರು. ಹೊರಗಿನವರು ಬಾಯಿ ಮುಚ್ಚು ಕೂರುವುದೇ ದೇಶ ಪ್ರೇಮ ವಾಗಿದ್ದು ಹೊರಗಿನ ಎಲ್ಲರೂ ಅಲ್ಲಿ ಮೂಗು ತೂರಿಸೋ ಕೆಲಸ ಬಿಟ್ಟು ಬಿಡಿ ಎಂದಿದ್ದಾರೆ. ಬೋಳಿಯಾರ್ ಘಟನೆಯಲ್ಲಿ ಮೆರವಣಿಗೆ ಎಲ್ಲವೂ ಆಗಿದೆ. ಆದರೆ ಮತ್ತೆ ಮೂರು ಜನ ಬೈಕ್ ನಲ್ಲಿ ಬಂದು ಸಮಸ್ಯೆ ಮಾಡಿದ್ದಾರೆ. ಆ ಬಳಿಕ ಅವರು ಬೈಕ್ ನಲ್ಲಿ ಬಂದು ಮತ್ತೆ ಹಲ್ಲೆ ಮಾಡಿರೋದು ದೊಡ್ಡ ತಪ್ಪು. ಭಾರತ್ ಮಾತ ಕೀ ಜೈ ಅಂತ ಎಲ್ಲಾ ದೇಶಭಕ್ತರು ಎಲ್ಲೂ ಹೇಳಬಹುದಾದ್ರೂ ಅಲ್ಲಿ ಬೇರೆ ಏನು ಅವಾಚ್ಯ ಶಬ್ದ ಬೈದಿದ್ದಾರೆ ಅಂತ ಯಾರಿಗೂ ಗೊತ್ತಿಲ್ಲ. ಅಲ್ಲಿ ರಾಜಕೀಯ ಮಾಡಿದ್ರೆ ಯಾರಿಗೂ ಒಂದು ಓಟ್ ಹೆಚ್ಚಾಗಲ್ಲ ಅಥವಾ ಯಾವುದೇ ಪಕ್ಷಕ್ಕೂ ಅಲ್ಲಿ ಓಟ್ ಹೆಚ್ಚಾಗಲ್ಲ. ನನ್ನ ಚುನಾವಣೆಯಲ್ಲಿ ಎರಡು ಪಕ್ಷ ಸೇರಿ ನನ್ನನ್ನು ಸೋಲಿಸಲು ಪ್ರಯತ್ನ ಪಟ್ಟರು. ಅವರು ಯಾರು ಅನ್ನೋದು ಎಲ್ಲರಿಗೂ ಗೊತ್ತಿದೆ. ನಾನೀಗ ಸ್ಪೀಕರ್, ಹಾಗಾಗಿ ಯಾವುದೇ ಪಕ್ಷದ ಹೆಸರು ಹೇಳಲ್ಲ ಆದ್ರೆ ಈ ವಿಚಾರ ಸುಮ್ಮನೆ ದೊಡ್ಡದು ಮಾಡೋರೇ ದೇಶದ್ರೋಹಿಗಳೆಂದ ಅವರು ಪೊಲೀಸರಿಗೆ ಕೆಲಸ ಮಾಡಲು ಬಿಡಿ, ಅವರು ಎಲ್ಲವನ್ನೂ ಸರಿ‌ ಮಾಡ್ತಾರೆ ಎಂದರು. ಭಾರತ್ ಮಾತಕೀ ಜೈ ಎಲ್ಲೂ ಕೂಡ ಹೇಳಬಹುದು. ರಸ್ತೆ, ಮಸೀದಿ, ಎಲ್ಲೂ ನಾವು ಭಾರತ್ ಮಾತ ಕೀ ಜೈ ಹೇಳಬಹುದುಅವರು ಏನು ಹೇಳಿದ್ದಾರೆ ಅನ್ನೋ ಬಗ್ಗೆ ಸ್ಥಳೀಯರು ಪೊಲೀಸ್ ದೂರು ನೀಡಿದ್ದಾರೆ. ಇದರ ಬಗ್ಗೆ ಹೊರಗಿನವರು ಬಂದು ಮಾತನಾಡೋ ಅಗತ್ಯ ಇಲ್ಲ.ಎರಡೂ ಕಡೆಯ ತಪ್ಪಿನ ಬಗ್ಗೆ ಪೊಲೀಸರು ಸಿಸಿಟಿವಿ ನೋಡಿ ಕ್ರಮ ತೆಗೋತಾರೆ. ನಾನು ಶಾಸಕನಾಗಿ 99% ಸತ್ಪ್ರಜೆಗಳನ್ನ ನೋಡಿಕೊಳ್ಳೋದು ಜವಾಬ್ದಾರಿ ಮತ್ತುಉ ಳಿದ 1% ಕೆಟ್ಟ ಜನರನ್ನು ‌ಪೊಲೀಸರು ನೋಡಿಕೊಳ್ತಾರೆ. ಅಲ್ಲಿನ ಜನರಿಗೆ ಯಾವುದೇ ಸಮಸ್ಯೆ ಇಲ್ಲ, ಹೊರಗಿನವರಿಗೆ ಸಮಸ್ಯೆಯಾಗಿದೆ. ನಾವು ಅಲ್ಲಿನ ಸಮಸ್ಯೆ ಬಗೆ ಹರಿಸಲು ಕೆಲಸ ಮಾಡಬೇಕು ಹೊರತು ಅದು ಬಿಟ್ಟು ಅಲ್ಲಿನ ಸಮಸ್ಯೆ ಮತ್ತಷ್ಟು ಹೆಚ್ಚಿಸಲು ನಾವು ಹೋಗಬಾರದು. ನಾನು ಆಸ್ಪತ್ರೆಗೆ ಹೋಗಿಲ್ಲ, ಇಂಥದ್ದಕ್ಕೆ ನಾವು ಪ್ರೋತ್ಸಾಹ ಕೊಡಬಾರದು. ಆಸ್ಪತ್ರೆಯಲ್ಲಿ ಬಡವರಿದ್ದಾರೆ, ಅವರನ್ನು ‌ನಾವು ನೋಡಬೇಕು. ಅದು ಬಿಟ್ಟು ಸಮಸ್ಯೆ ಸೃಷ್ಟಿಸಿ ಗಲಾಟೆ ಮಾಡಿ ಆಸ್ಪತ್ರೆಗೆ ಸೇರಿದವ್ರನ್ನ ನೋಡೋದಲ್ಲ. ಅವರನ್ನು ಅವರಷ್ಟಕ್ಕೆ ಬಿಡಿ, ಅವರು ಅಲ್ಲಿಗೆ ಸರಿಯಾಗ್ತಾರೆ. ನಾವು ರಾಜಕಾರಣಿಗಳು ಇಂಥದ್ದಕ್ಕೆ ತಲೆ ಹಾಕಲೇಬಾರದು. ನನಗೆ ನನ್ನ ಕ್ಷೇತ್ರದ ಎಲ್ಲರೂ ಆತ್ಮೀಯರೇ, ಆದರೆ ತಪ್ಪು ಮಾಡಿದವರಿಗೆ ಸಪೋರ್ಟ್ ಮಾಡಲ್ಲ. ಈ ವಿಷಯದಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಾನು ಆಸ್ಪತ್ರೆಗೆ ಭೇಟಿ ನೀಡೋದು ಎಲ್ಲಾ ಮಾಡಿದರೆ‌ ಮತ್ತೆ ಗೊಂದಲ ಆಗುತ್ತೆ. ಯಾಕೆ ಒಬ್ಬೊಬ್ಬರು ರಾಜಕೀಯದವರು ಅವರ ಹತ್ತಿರ ಹೋಗಬೇಕು.ನನ್ನನ್ನೂ ಸೇರಿಸಿ ರಾಜಕೀಯ ವ್ಯಕ್ತಿಗಳು ಅಲ್ಲಿಗೆ ಹೋಗಲೇ ಬಾರದು ಆಗ ಆ ಸಮಸ್ಯೆ ತಾನಾಗಿ ಬಹೆಹರಿಯುತ್ತೆ ಎಂದಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *