KARNATAKA
ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ..!
ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ ಮಿತಿಯಿಲ್ಲದೆ ಜನ ಅಲ್ಲಲ್ಲಿ ಪ್ರಾಣ ಬಿಡುತ್ತಿದ್ದಾರೆ. ಎಳೆ ವಯಸ್ಸಿನ ಪು್ಟ್ಟ ಮಕ್ಕಳಿಂದ ಹಿಡಿದು 50 – 60 ವರ್ಷದ ಜನ ಗೊತ್ತಿಲ್ಲದೇ ಏಕಾಏಕಿ ಕುಸಿದು ಬಿದ್ದು, ಮಲಗಿದಲ್ಲಿ ಪ್ರಾಣ ಕಳಕೊಳ್ಳುತ್ತಿದ್ದಾರೆ. ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಗಬ್ಬೂರು ಗ್ರಾಮದಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃತ ಬಾಲಕ. ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ವಿದ್ಯಾರ್ಥಿ ಶಿವಪ್ರಸಾದ್ ವಕೀಲ ಶಿವಣ್ಣ ಎಂಬುವವರ ಪುತ್ರ. ಗಬ್ಬೂರ್‌ನಲ್ಲಿ ಸೈನಿಕ ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್‌ನಲ್ಲೇ ಏಕಾಏಕಿ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : TV ನೋಡುತ್ತಿದ್ದ ವೇಳೆ 8 ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ..!!
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಕಾವ್ಯಶ್ರೀ ಎಂಬುವವರ ಪುತ್ರ ಸಚಿನ್ ಎಂದು ತಿಳಿದುಬಂದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದನು. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಇದ್ದಲ್ಲಿಯೇ ಕೊನೆಯುಸಿರೆಳೆದಿದ್ದೇನೆ.ಮಲಗಿದ್ದ ಮಗನನ್ನು ಮಾತನಾಡಿಸಲು ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.
ಇತ್ತಿಚ್ಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಎಳೆ ವಯಸ್ಸಿನ ಮಕ್ಕಳು ಬಲಿಯಾಗುವುದು ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿದೆ. ಎಳೆ ಮಕ್ಕಳ ಆರೋಗ್ಯ ಬಗ್ಗೆಯೂ ಹೆಚ್ಚಿನ ಗಮನ ಹರಿಸಬೇಕಾದ ಅಗತ್ಯವಿದ್ದು ಶಾಲಾ- ಕಾಲೇಜುಗಳಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವ ಅವಶ್ಯಕತೆ ಇದೆ.