LATEST NEWS
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ – ಕೋಟ ಶ್ರೀನಿವಾಸ ಪೂಜಾರಿ
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಬೇಡ – ಕೋಟ ಶ್ರೀನಿವಾಸ ಪೂಜಾರಿ
ಉಡುಪಿ ನವೆಂಬರ್ 5: ಟಿಪ್ಪು ಜಯಂತಿ ಆಮಂತ್ರಿಣ ಪತ್ರದಲ್ಲಿ ನನ್ನ ಹೆಸರು ಹಾಕದಿರುವಂತೆ ರಾಜ್ಯ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದು, ಜಿಲ್ಲಾಡಳಿತಕ್ಕೂ ಈ ಬಗ್ಗೆ ಸೂಚನೆ ನೀಡಿದ್ದೇನೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ರಾಜ್ಯ ಸರಕಾರ ಆಚರಿಸಲು ಹೊರಟಿರುವ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧವಿದೆ ಎಂದು ಹೇಳಿದ ಅವರು ಟಿಪ್ಪು ಕ್ರೌರ್ಯದ ಸಂಕೇತ, ಟಿಪ್ಪು ಕನ್ನಡ ವಿರೋಧಿಯಾಗಿದ್ದ , ಟಿಪ್ಪುವಿನಂತ ಧರ್ಮಾಂಧನ ಜಯಂತಿ ಮಾಡಿದರೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತೆ ಎಂದು ಹೇಳಿದರು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಟಿಪ್ಪು ಜಯಂತಿ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೇಸ್ ಸರಕಾರದ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಸವಾಲು ಹಾಕಿ ಟಿಪ್ಪು ಜಯಂತಿ ಆಚರಿಸಿದರು, ಅಂತವರನ್ನು ಜನರು ಚುನಾವಣೆಯಲ್ಲಿ ಅವರನ್ನು ತಿರಸ್ಕರಿಸಿದರು ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಿದ್ದರಾಮಯ್ಯ ಅವರನ್ನು ಕಂಡರೆ ಹೆದರಿಕೆ ಹಾಗಾಗಿ ಟಿಪ್ಪು ಜಯಂತಿ ಆಚರಣೆ ಮುಂದಾಗಿದ್ದಾರೆ. ಟಿಪ್ಪು ಜಯಂತಿ ಮಾಡ್ದೆ ಇದ್ರೆ ಸಿದ್ದರಾಮಯ್ಯ ಎಲ್ಲಿ ಸರಕಾರದಿಂದ ಬೆಂಬಲ ಹಿಂದೆ ಪಡಿತಾರೆ ಅಂತ ಕುಮಾರಸ್ವಾಮಿ ಗೆ ಹೆದರಿಕೆ ಎಂದು ವ್ಯಂಗ್ಯವಾಡಿದರು.