LATEST NEWS
ಟಿಬೇಟ್ ನಲ್ಲಿ ಭೂಕಂಪ – 30ಕ್ಕೂ ಅಧಿಕ ಮಂದಿ ಸಾವು
ನವದೆಹಲಿ: ನೇಪಾಳದ ಗಡಿಯ ಸಮೀಪ ಟಿಬೆಟ್‌ನಲ್ಲಿ ಇಂದು ಸಂಭವಿಸಿದ 7.1 ತೀವ್ರತೆಯ ಭೂಕಂಪದಿಂದಾಗಿ 30ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಚೀನಾದ ಮಾಧ್ಯಮ ಕ್ಸಿನ್ಹುವಾವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ತಿಳಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ (NCS), ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‌ನ ಕ್ಸಿಜಾಂಗ್ ಅದರ ಕೇಂದ್ರಬಿಂದುವಾಗಿದೆ. ಬಿಹಾರ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.