Connect with us

    DAKSHINA KANNADA

    ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

    ಮಂಗಳೂರು :  ಅಕ್ಟೋಬರ್ 13ರಂದು, ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು.

    ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳಿಗಾಗಿ ಪ್ರತಿಷ್ಠಿತ ಗಡಿನಾಡ ಪ್ರಶಸ್ತಿಯನ್ನು ಕುನಿಲ್ ಗ್ರೂಪ್ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್, ಇವರಿಗೆ ನೀಡಿ ಗೌರವಿಸಿತು. 35 ವರ್ಷಗಳ ಹಿಂದೆ ಕಾಸರಗೋಡು ಜಿಲ್ಲೆಯ ಶಿರಿಯಾ ಎಂಬ ಸಣ್ಣ ಗ್ರಾಮದಲ್ಲಿ ಡಾ। ಕುನಿಲ್ ಅವರ ಶೈಕ್ಷಣಿಕ ಯಾತ್ರೆಯು ಪ್ರಾರಂಭವಾಯಿತು. ಅಲ್ಲಿ ಅವರು ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಸಮಗ್ರ ಶಿಕ್ಷಣವನ್ನು ನೀಡುವ ಶಾಲೆಯನ್ನು ಸ್ಥಾಪಿಸಿದರು. ಸ್ಥಳೀಯ ಸಮುದಾಯದ ಸಹಕಾರದೊಂದಿಗೆ ಅವರು ಬದಿಯಡ್ಕದಲ್ಲಿ ಎರಡನೇ ಶಾಲೆಯನ್ನು ಸ್ಥಾಪಿಸಿದರು ಹಾಗೂ ಅವರ ನಿರಂತರ ಬೆಂಬಲದಿಂದ ಉತ್ತೇಜಿತರಾಗಿ, ಕರ್ನಾಟಕದ ನಾಟೆಕಲ್’ನಲ್ಲಿ ಮತ್ತು ತುಂಬೆಯಲ್ಲಿ ಕುನಿಲ್ ಶಾಲೆಗಳನ್ನು ವಿಸ್ತರಿಸಿದರು.
    ನಾಲ್ಕು ಶಾಲೆಗಳು 7000 ವಿದ್ಯಾರ್ಥಿಗಳಿಗೆ ಪೋಷಕ ಭೂಮಿಯಾಗಿ ಮಾರ್ಪಟ್ಟಿವೆ. 600 ವೃತ್ತಿಪರ ಸಿಬ್ಬಂದಿ ಮತ್ತು 125 ಶಾಲಾ ವಾಹನಗಳೊಂದಿಗೆ ಈ ಶಾಲೆಗಳು ಅತ್ತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. 100% ಫಲಿತಾಂಶವನ್ನು ನಿರಂತರವಾಗಿ ಕುನಿಲ್ ಶಾಲೆಗಳು ಸಾಧಿಸುತ್ತಿವೆ, ಇದು ಡಾ. ಫಖ್ರುದ್ದೀನ್ ಕುನಿಲ್ ಅವರ ಶಿಕ್ಷಣದಲ್ಲಿನ ಶ್ರೇಷ್ಠತೆಯ ಬದ್ಧತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಅನುಮತಿ ದೊರೆತರೆ ಅಧ್ಯಕ್ಷರಾದ ಡಾ। ಫಖ್ರುದ್ದೀನ್ ಕುನಿಲ್ ಅವರು ಬಿ.ಎ., ಬಿ.ಕಾಂ, ಬಿ.ಎಸ್ಸಿ ಮತ್ತು ಬಿ.ಬಿ.ಎ.ಯಲ್ಲಿ ಪದವಿ ಕೋರ್ಸ್‌ಗಳನ್ನು ಪರಿಚಯಿಸಲು ಯೋಜನೆಯನ್ನು ರೂಪಿಸಿದ್ದಾರೆ. ಇದರಿಂದಾಗಿ ಶೈಕ್ಷಣಿಕ ಅವಕಾಶಗಳನ್ನು ಇನ್ನಷ್ಟು ಸಮೃದ್ಧಗೊಳಿಸಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸಬಹುದಾಗಿದೆ. ಡಾ। ಫಖ್ರುದ್ದೀನ್ ಕುನಿಲ್, ಅಧ್ಯಕ್ಷರು, ಕುನಿಲ್ ಗ್ರೂಪ್,  ರಾಜ್ ಪ್ರಸಾದ್ ನಾಯ್ಕ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕುನಿಲ್ ಗ್ರೂಪ್ ಅವರುಗಳು ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply