Connect with us

DAKSHINA KANNADA

ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ಬಳಸುವಂತೆ ಡಾ. ಹರೀಶ್ ಆಚಾರ್ಯ ಮನವಿ

ಮಂಗಳೂರು : ಚುನಾವಣಾ  ಕಾರ್ಯ ನಿರ್ವಹಣೆಗೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷಾ ಕಾರ್ಯ, ಶಿಕ್ಷಕರ ವಯೋಮಿತಿ , ಆನಾರೋಗ್ಯ ಇನ್ನಿತರ ಅಗತ್ಯ ಅಂಶಗಳನ್ನು ಆಧರಿಸಿಕೊಂಡು ನಿಯೋಜಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ವಿಶ್ವದ ಅತ್ಯಂತ ದೊಡ್ಡ ಪ್ರಜಾಸತ್ತಾತ್ಮಕ ದೇಶದ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸುವುದು  ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ.  ಚುನಾವಣಾ  ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಪ್ರತಿಯೊಬ್ಬ ಸಿಬ್ಬಂದಿಯ ಸಹಕಾರವೂ ಅತ್ಯಗತ್ಯವಾಗಿದೆ. ಆದರೆ ಚುನಾವಣಾ  ಕಾರ್ಯ ನಿರ್ವಹಣೆಗೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷಾ ಕಾರ್ಯ, ಶಿಕ್ಷಕರ ವಯೋಮಿತಿ , ಆನಾರೋಗ್ಯ ಇನ್ನಿತರ ಅಗತ್ಯ ಅಂಶಗಳನ್ನು ಆಧರಿಸಿಕೊಂಡು ನಿಯೋಜಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಶೈಕ್ಷಣಿಕ ವರ್ಷ ಅಂತ್ಯದ ಈ ಸಂದರ್ಭ ಎಲ್ಲಾ ಶಿಕ್ಷಕರು ಪರೀಕ್ಷಾ ಕಾರ್ಯ ಹಾಗೂ ಅದರ ಮೌಲ್ಯಮಾಪನಾ ಕಾರ್ಯದ ಒತ್ತಡದಲ್ಲಿ  ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಕರು ಈ ಕಾರ್ಯದಲ್ಲಿ ಸಂಪೂರ್ಣ  ತೊಡಗಿಕೊಳ್ಳುವುದು ಅತ್ಯಂತ ಅವಶ್ಯಕವೂ ಆಗಿದೆ. ಆದರೆ ಶಿಕ್ಷಕರು ವಿಚಕ್ಷಣ ದಳ, ಗಡಿ ತಪಾಸಣೆ ಇನ್ನಿತರ ಚುನಾವಣಾ ಕಾರ್ಯಗಳನ್ನು ನಿರ್ವಹಿಸ ಬೇಕಾದ ಸಂದರ್ಭದಲ್ಲಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದುದರಿಂದ ಶಿಕ್ಷಕರನ್ನು ನಿಯೋಜಿಸುವ ಸಂದರ್ಭ ಚುನಾವಣಾ ಆಯೋಗವು ಶೈಕ್ಷಣಿಕ ಕರ‍್ಯ ಚಟುವಟಿಕೆಗಳಿಗೆ ಹೆಚ್ಚು ಆದ್ಯತೆಯನ್ನು ನೀಡಿ ಯೋಚಿಸಿ ನಿಯೋಜಿಸಬೇಕೆಂದು ಅವರು ಮನವಿಯನ್ನು ಮಾಡಿದ್ದಾರೆ.

ಯಾವುದೇ ಸಿಬ್ಬಂದಿಗಳನ್ನು ನಿವೃತ್ತಿಗೆ ಆರು ತಿಂಗಳು ಅಥವಾ ಅದಕ್ಕಿಂತ ಕಡಿಮೆ ಸೇವಾವಧಿ ಇರುವವರನ್ನು ನಿಯೋಜಿಸಬಾರದೆಂದು ಚುನಾವಣಾ ಆಯೋಗದ ನಿಯಮವಿದೆ. ಆದರೆ ಅನೇಕ ನಿವೃತ್ತಿಯ ಅಂಚಿನಲ್ಲಿರುವ ಶಿಕ್ಷಕರನ್ನು ಚುನಾವಣಾ  ಕಾರ್ಯಕ್ಕೆ ನಿಯೋಜಿಸಲಾಗಿದೆ. ಹಾಗೆಯೇ ದೈಹಿಕ ಅನಾರೋಗ್ಯದಿಂದ ಬಳಲುತ್ತಿರುವ ಶಿಕ್ಷಕರನ್ನು ಹಾಗೂ ಗರ್ಭಿಣಿ ಮಹಿಳಾ ಶಿಕ್ಷಕರನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ ಚುನಾವಣಾ ಕರ್ತವ್ಯಗಳಿಂದ ದೂರವಿಡಬೇಕೆಂದು ಕೂಡಾ ಒತ್ತಾಯಿಸಿ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *