Connect with us

  KARNATAKA

  ಉಡುಪಿ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಕೆ.ಅರುಣ್..!

  ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಕೆ.ಅರುಣ್ ಇಂದು ನಿರ್ಗಮನ ಎಸ್‌ಪಿ ಅಕ್ಷಯ್ ಹಾಕೇ ಅವರಿಂದ ಅಧಿಕಾರ ಸ್ವೀಕರಿಸಿದರು

  ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಕೆ.ಅರುಣ್ ಇಂದು ನಿರ್ಗಮನ ಎಸ್‌ಪಿ ಅಕ್ಷಯ್ ಹಾಕೇ ಅವರಿಂದ ಅಧಿಕಾರ ಸ್ವೀಕರಿಸಿದರು.

  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ರೀತಿಯ ಕೋಮು ಹಿಂಸಾಚಾರ ಉಡುಪಿಯಲ್ಲಿ ಸಹಿಸಲ್ಲ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು.

  ಅನೈತಿಕ ಪೊಲೀಸ್‌ ಗಿರಿಗೂ ಜಿಲ್ಲೆಯಲ್ಲಿ ಅವಕಾಶ ಇಲ್ಲ. ಇದರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

  ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳಿಗೆ, ಮಣಿಪಾಲದಲ್ಲಿ ನಡೆಯುತ್ತಿರುವ ಡ್ರಗ್ಸ್ ಪಾರ್ಟಿಗಳಿಗೆ ಕಡಿವಾಣ ಹಾಕಲಾಗುವುದು.

  ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

  ಡಾ.ಕೆ, ಅರುಣ್ ತಮಿಳುನಾಡು ಮೂಲದವರಾಗಿದ್ದು ಎಂಬಿಬಿಎಸ್ ಪದವೀಧರರಾಗಿದ್ದಾರೆ.

  2014ರ ಐಎಪಿಎಸ್ ಬ್ಯಾಚಿನ ಅಧಿಕಾರಿಯಾಗಿದ್ದು, ಪಾಂಡಿಚೇರಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ.

  ಚಿತ್ರದುರ್ಗ, ದಾವಣಗೆರೆ, ವಿಜಯಪುರ ಜಿಲ್ಲಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು, ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶು ಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply