Connect with us

LATEST NEWS

ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ಪೀಟರ್ ಪಾವ್ಲ್ ಸಲ್ಡಾನಾ ನೇಮಕ

ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ಪೀಟರ್ ಪಾವ್ಲ್ ಸಲ್ಡಾನಾ ನೇಮಕ

ಮಂಗಳೂರು ಜುಲೈ 3: ಮಂಗಳೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಪೀಟರ್ ಪಾವ್ಲ್ ಸಲ್ಡಾನಾ ಅವರನ್ನು ನೇಮಕಗೊಳಿಸಿ ಪೋಪ್ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ. ಪೋಪ್ ಜಗದ್ಗುರುಗಳ ಆದೇಶವನ್ನು ಪ್ರಸ್ತುತ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಮಂಗಳೂರಿನಲ್ಲಿ ಇಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಡಾ. ಪೀಟರ್ ಪಾವ್ಲ್ ಸಲ್ಡಾನಾ ಅವರು ಮಂಗಳೂರು ಧರ್ಮಪ್ರಾಂತ್ಯದ 14ನೇ ಧರ್ಮಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದಲ್ಲಿ 2,48,860 ಕೆಥೋಲಿಕ್ ಕ್ರೈಸ್ತರನ್ನು ತನ್ನ ವ್ಯಾಪ್ತಿಯ 124 ಚರ್ಚ್ ಗಳನ್ನು ಹೊಂದಿದೆ.

ಮಂಗಳೂರು ಕಿರೆಂ ಮೂಲದ ಪೀಟರ್ ಪಾವ್ಲ್ ಸಲ್ಡಾನಾ ಅರು ಪ್ರಸ್ತುತ ರೋಮಿನ ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

1991 ಮೇ 06 ರಂದು ಗುರು ದೀಕ್ಷೆ ಪಡೆದ ಪೀಟರ್ ಪಾವ್ಲ್ ಸಲ್ಡಾನಾ ಅವರು ನಂತರ ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಹಾಗೂ ಮಂಗಳೂರಿನ ಮಿಲಾಗ್ರಿಸ್ ಹಾಗೂ ವಿಟ್ಲ ಚರ್ಚ್‌ಗಳಲ್ಲಿ ಧಾರ್ಮಿಕ ಗುರುಗಳಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ರೋಮ್‌ಗೆ ತೆರಳಿದ ಇವರು ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದರು ನಂತರ ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇವರನ್ನು ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್ ಆಗಿ ಕ್ರೈಸ್ತರ ಪರಮೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಅವರು ಇಂದು ಭಾರತೀಯ ಸಮಯ ಅಪರಾಹ್ನ 3.30 ಗಂಟೆಗೆ ವ್ಯಾಟಿಕನ್, ದೆಹಲಿ ಮತ್ತು ಮಂಗಳೂರಿನಲ್ಲಿ ಏಕಕಾಲದಲ್ಲಿ ಈ ಘೋಷಣೆ ಮಾಡಲಾಯಿತು.

ಹಿಂದಿನ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಇವರು 22 ವರ್ಷ ಸೇವೆ ಸಲ್ಲಿಸಿ ಎರಡು ವರ್ಷಗಳ ಮೊದಲು ನಿವೃತ್ತರಾಗಿದ್ದು, ನೂತನ ಬಿಷಪರ ಅಧಿಕಾರ ಸ್ವೀಕಾರ ತನಕ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *