Connect with us

LATEST NEWS

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಡಾ. ರತ್ನಾಕರ್ ಅರೆಸ್ಟ್

ಮಂಗಳೂರು ನವೆಂಬರ್ 27: ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ರತ್ನಾಕರ್‌ ನನ್ನು ಬಂಧಿಸಿ 2 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.


ಡಾ. ರತ್ನಾಕರ್ ತನ್ನ ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಹಿನ್ನಲೆ ಸಾಮಾಜಿಕ ಕಾರ್ಯಕರ್ತರೊಬ್ಬರ ದೂರಿನ ಹಿನ್ನಲೆ ಮಹಿಳಾ ಪೊಲೀಸರು ವೈದ್ಯಾಧಿಕಾರಿ ಡಾ. ರತ್ನಾಕರ್‌ನನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು,

ಶನಿವಾರ ಮೂವರು ಸಂತ್ರಸ್ತರು ಹಾಗೂ ಮತ್ತೊಬ್ಬ ಮಹಿಳೆ ಸೇರಿ ನಾಲ್ವರು ಠಾಣೆಗೆ ಹಾಜರಾಗಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ದಿನಗಳ ಪೊಲೀಸ್ ಕಸ್ಟಡಿ ಪಡೆಯಲಾಗಿದೆ.

Advertisement
Click to comment

You must be logged in to post a comment Login

Leave a Reply