Connect with us

LATEST NEWS

ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ – ಡಾ. ರತ್ನಾಕರ್ ಪೊಲೀಸ್ ವಿಚಾರಣೆ

ಮಂಗಳೂರು: ತನ್ನ ಕಚೇರಿಯಲ್ಲಿರುವ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವೈದ್ಯ ಡಾ. ರತ್ನಾಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.
ಮಹಿಳೆಯೊಬ್ಬರ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಡಾ. ರತ್ನಾಕರ್ ವಿಚಾರಣೆ ನಡೆಸಲಾಗುತ್ತಿದೆ.


ಸರ್ಕಾರಿ ಕಚೇರಿಯಲ್ಲಿ ರತ್ನಾಕರ್ ನಿತ್ಯ ಮೋಜು ಮಸ್ತಿ ಮಾಡುತ್ತಿದ್ದರು. ಕೇವಲ ಚೆಲ್ಲಾಟ ಮಾತ್ರವಲ್ಲ ಎಲ್ಲರಿಗೂ ಮನರಂಜನೆ ನೀಡುತ್ತಿದ್ದರು. ರತ್ನಾಕರ್ ಎಲ್ಲರಿಗೂ ಎಂಟರ್​​ಟೈನ್​​ಮೆಂಟ್​ ಮಾಸ್ಟರ್​ ಆಗಿದ್ದರು. ಈ ಕುರಿತಂತೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ತನ್ನ ಕಚೇರಿಯ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ವಿಷಯವು ಮಾಧ್ಯಮಗಳಲ್ಲಿ ಬಹಿರಂಗಗೊಂಡರೂ ಕೂಡ ಭವಿಷ್ಯದ ಹಿತದೃಷ್ಟಿಯಿಂದ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ದೂರು ನೀಡಲು ಹಿಂದೇಟು ಹಾಕಿದ್ದಾರೆ.


ಆದರೆ ಮುಂದಿನ ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡುವೆವು ಎಂದಿದ್ದಾರೆ. ಈ ಸಂತ್ರಸ್ತರ ಪರವಾಗಿ ಮಹಿಳಾ ಸಂಘಟನೆಗಳಲ್ಲಿ ತೊಡಗಿಸಿಕೊಂಡ ಒಬ್ಬ ಮಹಿಳೆ ದೂರು ನೀಡಿದ್ದರು. ಅದರಂತೆ ವಿಚಾರಣೆಗಾಗಿ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್‌ ನನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆಯ ಬಳಿಕ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು’ ಎಂದು ತಿಳಿಸಿದ್ದಾರೆ.

 

Advertisement
Click to comment

You must be logged in to post a comment Login

Leave a Reply