Connect with us

    LATEST NEWS

    ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ

    ಮಂಗಳೂರು ಜನವರಿ 20: ಹೆದ್ದಾರಿಯಲ್ಲಿ ಸೈಡ್ ಕೊಡುವ ವಿಚಾರಕ್ಕೆ ಬಸ್ ಹಾಗೂ ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದ್ದು, ಬೈಕ್ ಸವಾರ ಸಿಟಿ ಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕರಾವಳಿ ಶ್ರಮಿಕ ಸಂಘ ಹಾಗು ಖಾಸಗಿ ಬಸ್ ಚಾಲಕ ನಿರ್ವಾಹಕರ ಸಂಘದ ನಗರ ಪೊಲೀಸ್ ಕಮಿಷನರ್ ಅವರಿಗೆ ಮನವಿ ಸಲ್ಲಿಸಿತು.


    ಮಾಧ್ಯಮಗಳೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ್ಯ ಎಂ.ಜಿ ಹೆಗಡೆ ಕ್ಷುಲಕ ಕಾರಣಕ್ಕಾಗಿ ಬಸ್ ಚಾಲಕನ ಮೇಲೆ ಬೈಕ್ ಸವಾರರಿಂದ ಇಂತಹ ಕುಕೃತ್ಯ ನಡೆದಿರುವುದು ಖಂಡನೀಯ. ಘಟನೆಯ ಕುರಿತು ನಗರ ಪೊಲೀಸ್ ಕಮಿಷನರ್ ಅವರಿಗೆ ಮನವಿ ಸಲ್ಲಿಸಲಾಗಿದೆ, ತಕ್ಷಣ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮನವಿ ಮಾಡಿದ್ದೇವೆ ಎಂದರು.

    ಇನ್ನು ಬಸ್ ಚಾಲಕ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಮಾತನಾಡಿ ಕಳೆದ ರಾತ್ರಿ ಸೈಡ್ ಕೊಡುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಬಸ್ ಚಾಲಕ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಮಾಡಿರುವ ಹಲ್ಲೆಯನ್ನು ನಮ್ಮ ಸಂಘ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply