Connect with us

    DAKSHINA KANNADA

    ಮಂಗಳೂರು: ಸರಣಿ ಅಪಘಾತ ಪ್ರಕರಣದ ಚಾಲಕನ ಪರೀಕ್ಷಾ ವರದಿ ನೆಗೆಟಿವ್‌

    ಮಂಗಳೂರು, ಮೇ 09: ನಗರದ ಬಲ್ಲಾಳ್‌ಭಾಗ್‌ನಲ್ಲಿ ನಡೆದ ಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕನ ಡ್ರಗ್ಸ್‌, ಮದ್ಯ ಸೇವನೆ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ತಿಳಿಸಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಎನ್‌.ಶಶಿಕುಮಾರ್‌, ಅಪಘಾತದಲ್ಲಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿತ್ತು. ಆ ಬಳಿಕ ಮಹಿಳೆ ಮೃತಪಟ್ಟಿದ್ದು ಚಾಲಕನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣ ದಾಖಲಾಗಿತ್ತು.

    ಇನ್ನು ಕಾರು ಚಾಲಕ ಡ್ರಗ್ಸ್‌ ಅಥವಾ ಮದ್ಯ ಸೇವಿಸಿದ ಬಗ್ಗೆ ಸಂದೇಹ ಉಂಟಾಗಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿ ನೆಗೆಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *