LATEST NEWS
ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ತಿರುವನಂತಪುರ ಮೇ 06: ಇತಿಹಾಸದಲ್ಲಿ ಇದೇ ಮೊದಲ ಬಾರಿ ದೇಶದ ರಾಷ್ಟ್ರಪತಿಯೊಬ್ಬರು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇ 19ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಭೇಟಿ ನೀಡುವ ಮೂಲಕ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್.ಪ್ರಶಾಂತ್ ರಾಷ್ಟ್ರಪತಿ ಮೇ 18ರಂದು ಕೇರಳಕ್ಕೆ ಆಗಮಿಸಲಿದ್ದು, ಬಳಿಕ ಕೊಟ್ಟಾಯಂ ಜಿಲ್ಲೆಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 19ರಂದು ಬೆಳಗ್ಗೆ ಶಬರಿಮಲೆಯ ಬಳಿಯಿರುವ ನೀಲಕ್ಕಲ್ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಬಳಿಕ ಪಂಪಾ ಬೇಸ್ ಕ್ಯಾಂಪ್‌ಗೆ ತೆರಳಿದ್ದಾರೆ.
ಪಂಪಾ ಬೇಸ್ ಕ್ಯಾಂಪ್‌ನಿಂದ ದೇವಾಲಯಕ್ಕೆ ತೆರಳುವ ಪ್ರಯಾಣ ವಿಧಾನದ ಕುರಿತು ಅಂತಿಮ ನಿರ್ಧಾರವನ್ನು ಭದ್ರತಾ ವ್ಯವಸ್ಥೆಯ ವಿಶೇಷ ರಕ್ಷಣಾ ಗುಂಪು ತೆಗೆದುಕೊಳ್ಳಲಿದೆ.
