BELTHANGADI
ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಮುಳುಗಿ ವಿಧ್ಯಾರ್ಥಿ ಸಾವು

ಬೆಳ್ತಂಗಡಿ ಡಿಸೆಂಬರ್ 10: ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿಧ್ಯಾರ್ಥಿಯೊಬ್ಬ ಸೋಮಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿ ನೀರುಪಾಲಾದ ಘಟನೆ ನಡೆದಿದೆ.
ಮೃತ ವಿಧ್ಯಾರ್ಥಿಯನ್ನು ಮೂಡಿಗೆರೆ ನಿವಾಸಿ ಸಮರ್ಥ್ (16) ಎಂದು ಗುರುತಿಸಲಾಗಿದೆ. ಸಮರ್ಥ ಬೆಳ್ತಂಗಡಿಯ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತರೊಂದಿಗೆ ಸ್ನಾನಕ್ಕೆ ಸೋಮಾವತಿಗೆ ತೆರಳಿದ್ದ ಎಂದು ಹೇಳಲಾಗಿದೆ. ಈ ಸಂದರ್ಭ ಸಮರ್ಥ್ ನೀರಿನಲ್ಲಿ ಮುಳುಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾದರೂ, ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
