LATEST NEWS
ಹೆಜಮಾಡಿ – ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು
ಉಡುಪಿ ಡಿಸೆಂಬರ್ 30: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಎಂದು ಗುರುತಿಸಲಾಗಿದೆ. ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು.
ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಅಮವಾಸ್ಯೆಯಂದೇ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ.