Connect with us

    LATEST NEWS

    ಶಾಲಾ ಕಾಲೇಜುಗಳಲ್ಲಿ ಗಾಂಜಾ ವ್ಯಸನಿಗಳ ತಡೆಗೆ ಕ್ರಮ : ಸಚಿವ ತಿಮ್ಮಾಪುರ

     ಶಾಲಾ ಕಾಲೇಜುಗಳಲ್ಲಿ ಗಾಂಜಾ ವ್ಯಸನಿಗಳ ತಡೆಗೆ ಕ್ರಮ : ಸಚಿವ ತಿಮ್ಮಾಪುರ

    ಮಂಗಳೂರು,ಸೆಪ್ಟೆಂಬರ್ 28:ಶಾಲಾ ಕಾಲೇಜುಗಳಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಗಾಂಜಾ ಹಾವಳಿಯ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಹೇಳಿದ್ದಾರೆ.

    ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಗಾಂಜಾ ಚಟಕ್ಕೆ ಬಲಿಯಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು .ಜಿಲ್ಲಾ ಮಟ್ಟದಲ್ಲಿಯೂ ಗಾಂಜಾ ಹಾವಳಿ ಮಟ್ಟ ಹಾಕುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಅವರು ಮಾಹಿತಿ ನೀಡಿದರು. ಹೆಚ್ಚಾಗಿ ಕಾಲೇಜು ಆವರಣಗಳಲ್ಲಿ ಗಾಂಜಾ ಹಾವಳಿ ಹೆಚ್ಚುತ್ತಿರುವ ಕುರಿತು ಕಾಲೇಜು ಪ್ರಾಂಶುಪಾಲರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ಗಾಂಜಾ ನಿಯಂತ್ರಣಕ್ಕೆ ರಾಜ್ಯಮಟ್ಟದಲ್ಲಿ ತಂಡ ರಚನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು .

    ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಯಂತ್ರಣ ಅಸಾಧ್ಯ ಎಂದು ಹೇಳಿದ ಅವರು ಹಿಂದಿನ ಕಾಲದಿಂದಲೂ ಮದ್ಯ ಸೇವನೆ ಮಾಡಲಾಗುತ್ತಿದೆ ಎಂದು ಅವರು ಸಮಜಾಯಿಷಿ ನೀಡಿದರು .ಮದ್ಯಪಾನದ ವಿರುದ್ಧ ಜಾಗೃತಿ ಮೂಡಿಸುವ ಹಾಗೂ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1260 ಮದ್ಯದಂಗಡಿಗಳ ಪರವಾನಗಿಯನ್ನು ನವೀಕರಿಸಲಾಗಿದೆ. ಇನ್ನುಳಿದ 1451 ಕ್ಕೂ ಹೆಚ್ಚು ಮದ್ಯದಂಗಡಿಗಳ ಪರವಾನಗಿಯನ್ನು ನವೀಕರಿಸಬೇಕಾಗಿದೆ ಎಂದು ಅವರು ತಿಳಿಸಿದರು .

     

    Share Information
    Advertisement
    Click to comment

    You must be logged in to post a comment Login

    Leave a Reply