Connect with us

    LATEST NEWS

    ಡ್ರಗ್ಸ್ ಪ್ರಕರಣ : ಶಾರುಖ್ ಮಗ ಆರ್ಯನ್​ ಖಾನ್ ಗೆ ಬಾಂಬೆ ಹೈಕೋರ್ಟ್ ನಿಂದ ಜಾಮೀನು

    ಮುಂಬೈ: ಐಷರಾಮಿ ಹಡಗಿನಲ್ಲಿ ನಿಷೇಧಿಕ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಸತತ ಎರಡು ದಿನಗಳ ಸುದೀರ್ಘ ವಿಚಾರಣೆ ಬಳಿಕ ಬಾಂಬೆ ಹೈಕೋರ್ಟ್, ಆರೋಪಿಗಳಾದ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರಿಗೆ ಜಾಮೀನು ನೀಡಿದೆ.


    ಆರ್ಯನ್ ಖಾನ್ ಪರ ವಾದ ಮಂಡಿಸಿದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು, ”ಹೋಟೆಲ್‌ನಲ್ಲಿ ಬೇರೆ ಬೇರೆ ಕೊಠಡಿಗಳಲ್ಲಿ ಜನರು ಧೂಮಪಾನ ಮಾಡುತ್ತಿದ್ದರೆ, ಹೋಟೆಲ್‌ನಲ್ಲಿರುವವರೆಲ್ಲರೂ ಪಿತೂರಿ ನಡೆಸುತ್ತಿದ್ದಾರೆ ಎಂದು ಅರ್ಥವೇ? ಅದನ್ನು ಪಿತೂರಿ ಎಂದು ಕರೆಯಲು ಯಾವುದೇ ಆಧಾರ ಇಲ್ಲ ಎಂದರು.

    ಆರೋಪಿಗಳ ಪರವಾಗಿ ಮುಕುಲ್ ರೋಹಟಗಿ, ಅಮಿತ್ ದೇಸಾಯಿ ಮತ್ತು ಅಲಿ ಕಾಶಿಫ್ ಖಾನ್ ದೇಶಮುಖ್ ಅವರು ವಾದ ಮಾಡಿದರೆ ಎನ್‌ಸಿಬಿ ಪರವಾಗಿ ಎಎಸ್‌ಜಿ ಅನಿಲ್ ಸಿಂಗ್ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮೂವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ

    Share Information
    Advertisement
    Click to comment

    You must be logged in to post a comment Login

    Leave a Reply