Connect with us

    FILM

    ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ – ತೆಲುಗು ನಟಿ ಹೇಮಾ ಅರೆಸ್ಟ್

    ಬೆಂಗಳೂರು ಮೇ 03: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣದಲ್ಲಿ ತೆಲುಗು ಕಿರುತೆರೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ನಡೆದ ರೇವ್​ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ ಬಳಿಕ ಆರೋಪಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿದ್ದು, ನಟಿ ಹೇಮಾ ಡ್ರಗ್ಸ್‌ ಸೇವಿಸಿದ್ದು ದೃಢಪಟ್ಟಿದೆ. ಈ ಕುರಿತಂತೆ ಎರಡು ಸಲ ನೋಟಿಸ್ ನೀಡಿದ್ದರೂ ಸಿಸಿಬಿ ಎದುರು ವಿಚಾರಣೆಗೆ ಹೇಮಾ ಹಾಜರಾಗಿರಲಿಲ್ಲ. ಹೀಗಾಗಿ ಸಿಸಿಬಿ ಪೊಲೀಸರು ಹೇಮಾರನ್ನು ಅರೆಸ್ಟ್​ ಮಾಡಿದ್ದಾರೆ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೇಮಾಗೆ ಮೆಡಿಕಲ್ ಟೆಸ್ಟ್‌ ಮಾಡಲಾಗಿದೆ. ನಾಳೆ ಬೆಳಗ್ಗೆ ಅವರನ್ನು ಆನೇಕಲ್ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply