DAKSHINA KANNADA
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಶಾಸಕರ ಕಛೇರಿಗೆ ಮುತ್ತಿಗೆ
ಪುತ್ತೂರು ಡಿಸೆಂಬರ್ 30: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ದಲಿತ ಸೇವಾ ಸಮಿತಿ ನೇತೃತ್ವದಲ್ಲಿ ಶಾಸಕರ ಕಛೇರಿಗೆ ಮುತ್ತಿಗೆ ಹಾಕಲಾಯಿತು.
ವಿಟ್ಲದಲ್ಲಿ ನಿರ್ಮಾಣವಾಗಬೇಕಿದ್ದ ಅಂಬೇಡ್ಕರ್ ಭವನಕ್ಕೆ ಜಾಗ ಮೀಸಲಿಟ್ಟು ವರ್ಷಗಳೇ ಕಳೆದರೂ ಸರಕಾರ ಯಾವುದೇ ಅನುದಾನ ನೀಡಿಲ್ಲ ಎಂದು ಪ್ರತಿಭಟಕಾರರು ಆರೋಪಿಸಿದರು. ಒಂದು ತಿಂಗಳ ಒಳಗೆ ಅನುದಾನ ಬಿಡುಗಡೆ ಮಾಡದೇ ಇದ್ದಲ್ಲಿ ಶಾಸಕರ ಕಛೇರಿ ಮುಂದೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆಯನ್ನೂ ಈ ವೇಳೆ ದಲಿತ ಸಂಘಟನೆಗಳು ನೀಡಿವೆ.
ಕಬಕದಿಂದ ಸುಮಾರು ಐದು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಬಂದು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.