LATEST NEWS
ಅನಾರೋಗ್ಯದಿಂದ ದುಬೈನಲ್ಲಿ ಉಡುಪಿ ಮೂಲದ ವಿಧ್ಯಾರ್ಥಿ ಸಾವು

ಉಡುಪಿ ಡಿಸೆಂಬರ್ 06: ಉಡುಪಿ ಮೂಲದ ವಿಧ್ಯಾರ್ಥಿಯೊಬ್ಬ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ದುಬೈನಲ್ಲಿ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ.
ಉಡುಪಿಯಲ್ಲಿ ಪಿಯುಸಿ ಮುಗಿಸಿ, ಪದವಿ ಶಿಕ್ಷಣಕ್ಕಾಗಿ ದುಬೈಗೆ ತೆರಳಿದ್ದ. ಅನಾರೋಗ್ಯಕ್ಕೀಡಾದ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಬಿಲಾಲ್ ತಂದೆ ಅಬ್ದುಸ್ಸಲಾಂ ಸೂರಿಂಜೆ ಅವರು 35 ವರ್ಷಗಳಿಂದ ದುಬೈಯಲ್ಲಿ ದುಡಿಯುತ್ತಿದ್ದ ಹಿನ್ನೆಲೆಯಲ್ಲಿ, ಶಿಕ್ಷಣಕ್ಕಾಗಿ ಬಿಲಾಲ್ ನಾಲ್ಕು ತಿಂಗಳ ಹಿಂದೆ ದುಬೈಗೆ ತೆರಳಿದ್ದರು.
