Connect with us

    LATEST NEWS

    ದುಬೈ ವಸತಿ ಸಂಕೀರ್ಣ ಕಟ್ಟದಲ್ಲಿ ಭಾರೀ ಬೆಂಕಿ – 16 ಮಂದಿ ಸಾವು…!!

    ದುಬೈ ಎಪ್ರಿಲ್ 16: ದುಬೈನ ವಸತಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದರಿಂದ 16 ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡ ಘಟನೆ ಅಲ್ ರಾಸ್‌ನಲ್ಲಿ ನಡೆದಿದೆ.


    ದುಬೈನ ಹಳೆಯ ಪ್ರದೇಶವಾದ ಅಲ್ ರಾಸ್‌ನಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ದುರ್ಘಟನೆಯಲ್ಲಿ ಭಾರತದ ಕೇರಳ ಮೂಲದ ದಂಪತಿಗಳು ಸೇರಿದಂತೆ ಕನಿಷ್ಠ ನಾಲ್ವರು ಭಾರತೀಯರು ಸೇರಿ 16 ಜನರು ಸಾವನ್ನಪ್ಪಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

    ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ದಂಪತಿಗಳು ಮತ್ತು ತಮಿಳುನಾಡಿನ ಇಬ್ಬರು ಪುರುಷರು, 3 ಪಾಕಿಸ್ತಾನಿ ಸೋದರಸಂಬಂಧಿಗಳು ಮತ್ತು ನೈಜೀರಿಯಾದ ಮಹಿಳೆ ಸೇರಿದಂತೆ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply